ಅರ್ಜಿ ಸಲ್ಲಿಸಿದ ಬಗ್ಗೆ ಬೆಳ್ತಂಗಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ರಕ್ಷಿತ್ ಶಿವರಾಂ ಏನಂದ್ರು ನೋಡಿ - Mahanayaka

ಅರ್ಜಿ ಸಲ್ಲಿಸಿದ ಬಗ್ಗೆ ಬೆಳ್ತಂಗಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ರಕ್ಷಿತ್ ಶಿವರಾಂ ಏನಂದ್ರು ನೋಡಿ

rakshath shivaram
18/11/2022

ಬೆಳ್ತಂಗಡಿ: ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಈ ಬಾರಿ ಟಿಕೆಟ್ ಆಕಾಂಕ್ಷಿಯಾಗಿದ್ದು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ.

ಯುವ ನಾಯಕರಾಗಿರುವ ಇವರು ಬೆಸ್ಟ್ ಫೌಂಡೇಶನ್ ಮೂಲಕವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದು ಚುನಾವಣಾ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ತಾನು ಬೆಳ್ತಂಗಡಿ ಮೂಲದವನೇ ಆಗಿದ್ದು,  ಹೊರಗಿನಿಂದ ಬಂದವ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದ್ದಾರೆ. ಇದರ ಬಗ್ಗೆ ಯಾರಿಗಾದರೂ ಅನುಮಾನ ಇದ್ದರೆ, ನನ್ನ ಬರ್ತ್ ಸರ್ಟಿಫಿಕೇಟ್ ಪರಿಶೀಲಿಸಲಿ ಎಂದು ಸವಾಲು ಹಾಕಿದ್ದಾರೆ.

ತಾನೂ ಕಾಂಗ್ರೆಸ್ ಹೈಕಮಾಂಡಿನ ತೀರ್ಮಾನಕ್ಕೆ ಬದ್ದ ಎಂದಿರುವ ಅವರು ಕಾಂಗ್ರೆಸ್ ಪಕ್ಷ ಅವಕಾಶ ನೀಡಿದರೆ, ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಾಗಿದ್ದೇನೆ, ಪಕ್ಷ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಯೋ ಅದರಂತೆ ಮುಂದೆ ಹೋಗುತ್ತೇನೆ ಯಾರೇ ಅಭ್ಯರ್ಥಿಯಾದರೂ ಪಕ್ಷದ ಗೆಲುವಿಗಾಗಿ ಶ್ರಮಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ