ಬೆಳ್ತಂಗಡಿ: ಆಟೋ ಚಾಲಕನ ಸಾವು ಪ್ರಕರಣಕ್ಕೆ ಟ್ವಿಸ್ಟ್: ಮದುವೆ ಮನೆಯಲ್ಲಿ ನಡೆದಿತ್ತಾ ಹೊಡೆದಾಟ? - Mahanayaka
1:25 AM Saturday 18 - October 2025

ಬೆಳ್ತಂಗಡಿ: ಆಟೋ ಚಾಲಕನ ಸಾವು ಪ್ರಕರಣಕ್ಕೆ ಟ್ವಿಸ್ಟ್: ಮದುವೆ ಮನೆಯಲ್ಲಿ ನಡೆದಿತ್ತಾ ಹೊಡೆದಾಟ?

praveen
01/12/2022

ಬೆಳ್ತಂಗಡಿ: ರಿಕ್ಷಾ ಚಾಲಕನ ಮೃತದೇಹ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಇದೀಗ ಹೊಸ ತಿರುವು ಲಭಿಸಿದ್ದು ತನ್ನ ಪತಿಯ ಸಾವಿನ ಬಗ್ಗೆ ಹಲವಾರು ಅನುಮಾನಗಳಿದ್ದು ಈ ಬಗ್ಗೆ ತನಿಖೆ ನಡೆಸುವಂತೆ ಮೃತ ಪ್ರವೀಣ್ ಪಿಂಟೋ ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Provided by

ಪ್ರವೀಣ್ ಪತ್ನಿ ನೀಡಿರುವ ದೂರಿನಲ್ಲಿ ಏನಿದೆ?

ಗುರುವಾಯನಕೆರೆಯಲ್ಲಿ ರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿರುವ ಪ್ರವೀಣ್ ಪಿಂಟೋ ಅವರು ಮಂಗಳವಾರ ರಾತ್ರಿ ಮನೆಯಿಂದ ಓಡಿಲ್ನಾಳ ಗ್ರಾಮದ ಅಮರ್ ಜಾಲ್ ಎಂಬಲ್ಲಿಗೆ ಮೆಹಂದಿ ಕಾರ್ಯಕ್ರಮಕ್ಕೆಂದು ಹೋಗಿದ್ದ. ಆತ ಮನೆಗೆ ಬಾರದಿದ್ದಾಗ ಪತ್ನಿ ಕರೆಮಾಡಿದಾಗ ರಾತ್ರಿ 1:39ಕ್ಕೆ ತಾನು ಮನೆಗೆ ಬರುತ್ತೇನೆ ಎಂದು ತಿಳಿಸಿದ್ದರು. ಆದರೆ ಮನೆಗೆ ಹಿಂದಿರುಗಿರಲಿಲ್ಲ ಬಳಿಕ ಬುಧವಾರ ಬೆಳಿಗ್ಗೆ ಪ್ರವೀಣನ ಡ್ರೈವಿಂಗ್ ಲೈಸನ್ಸ್ ಹಾಗೂ ದಾಖಲೆಗಳು ಕೆರೆಯ ಸಮೀಪ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ ಎಂದು ಅವರ ಪತ್ನಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಮೆಹಂದಿ ಮನೆಯಲ್ಲಿ ಪ್ರವೀಣ್ ಹಾಗೂ ಪ್ರದೀಪ್ ಶೆಟ್ಟಿ ಎಂಬವರ ಮಧ್ಯೆ ಮಾತಿನ ಚಕಮಕಿ ಹಾಗೂ ಹೊಡೆದಾಟ ನಡೆದಿರುವ ವಿಚಾರ ಬಳಿಕ ತಿಳಿದು ಬಂದಿರುವುದಾಗಿಯೂ ರಾತ್ರಿ 3 ಗಂಟೆಯ ಸುಮಾರಿಗೆ ತಮ್ಮ ಮನೆಯ ಸಮೀಪ ಕಾರೊಂದು ಬಂದು ಹೋಗಿರುವುದಾಗಿಯೂ ಮೃತದೇಹದಲ್ಲಿ ಪ್ರವೀಣ್ ಧರಿಸಿದ್ದ ಕೆಂಪು ಟೀ ಶರ್ಟ್ ಇರಲಿಲ್ಲ ಎಂದೂ ಇದರಿಂದಾಗಿ ಪ್ರವೀಣ್ ಅವರ ಅಸಹಜ ಸಾವಿನ ಬಗ್ಗೆ ಹಲವಾರು ಅನುಮಾನವಿದ್ದು ಕ್ರಮ ಕೈಗೊಳ್ಖುವಂತೆ ಮೃತನ ಪತ್ನಿ ರೇಷ್ಮಾ ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಮಾಹಿತಿ ನೀಡಿದ್ದಾರೆ.

ಪೊಲೀಸರಿಂದ ತನಿಖೆ ಆರಂಭ:

ಈ ದೂರಿನ ಆಧಾರದಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೊಲೀಸರು  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರಂಭದಲ್ಲಿ ಇದೊಂದು ಆತ್ಮಹತ್ಯೆ ಪ್ರಕರಣ ಎಂಬ ಮಾಹಿತಿಗಳು ಹೊರ ಬಂದಿತ್ತು. ಸ್ನೇಹಿತರಿಗೆ ಕರೆ ಮಾಡಿ ಹೇಳಿದ್ದ ಎಂದೂ ಹೇಳಲಾಗಿತ್ತು ಆದರೆ ಇದೀಗ ಪ್ರಕರಣದ ಬಗ್ಗೆ ಹಲವಾರು ಅನುಮಾನಗಳು ಸೃಷ್ಟಿಯಾಗಲಾರಂಭಿಸಿದೆ.

ಮೆಹಂದಿ ಮನೆಯಲ್ಲಿ ಏನು ಸಂಭವಿಸಿದೆ ಎಂಬ ವಿಚಾರದ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರವೀಣ್ ಮೇಲೆ ಹಲ್ಲೆ ನಡೆಸಿದವರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಬೆಳಗ್ಗಿನ ಜಾವ ಪ್ರವೀಣ್ ರವರ ಮನೆ ಸಮೀಪ ಬಂದ ಕಾರು ಯಾರದು ಯಾಕಾಗಿ ಬಂದಿದ್ದಾರೆ ಎಂಬುದು ಮತ್ತೊಂದು ಪ್ರಶ್ನೆಯಾಗಿ ಮಾರ್ಪಟ್ಟಿದೆ.

ಪೊಲೀಸರು ಈ ಎಲ್ಲಾ ವಿಚಾರಗಳನ್ನೂ ಗಮನದಲ್ಲಿಟ್ಟುಕೊಂಡು ಇದೀಗ ತನಿಖೆ ಆರಂಭಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದ್ದು ಇದರಿಂದ ಹೆಚ್ಚಿನ ಮಾಹಿತಿಗಳು ಲಭಿಸುವ ನಿರೀಕ್ಷೆಯಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ