ಬೆಳ್ತಂಗಡಿ: ಬೈಕ್ ಸ್ಕಿಡ್ ಆಗಿ ಸವಾರ ಸಾವು
ಬೆಳ್ತಂಗಡಿ; ಮುಂಡಾಜೆ ಗ್ರಾಮದ ದುರ್ಗಾ ಪರಮೇಶ್ವರಿ ದೇವಸ್ಥಾನದ ಸಮೀಪ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.
ಮೃತ ವ್ಯಕ್ತಿ ಅಣಿಯೂರು ನಿವಾಸಿಯಾಗಿರುವ ಪ್ರದೀಪ್ ಗೌಡ(22) ಎಂಬವರಾಗಿದ್ದಾರೆ. ರಾತ್ರಿಯ ವೇಳೆ ಇವರು ತಮ್ಮ ಸಂಬಂಧಿಕರಲ್ಲಿಗೆ ಹೋಗುತ್ತಿದ್ದಾಗ ಇವರು ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಹೊರಗೆ ಚಲಿಸಿ ಮನೆಯೊಂದರ ಗೇಟಿಗೆ ಡಿಕ್ಕಿ ಹೊಡೆದಿದೆ .
ಅಪಘಾತದ ಪರಿಣಾಮ ತಲೆಗೆ ಗಂಭೀರ ಗಾಯಗಳಾಗಿದ್ದ ಅವರನ್ನು ಸ್ಥಳೀಯರು ಕೂಡಲೇ ಉಜಿರೆಯ ಆಸ್ಪತ್ರೆಗೆ ಕೊಂಡೊಯ್ದು ಪ್ರಥಮ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಆ ವೇಳೆಗೆ ಅವರು ಮೃತ ಪಟ್ಟಿದ್ದರು.
ಘಟನೆಯ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka