ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿಗೆ ಭರ್ಜರಿ ಸ್ವಾಗತ
ಬೆಳ್ತಂಗಡಿ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿಯವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ ಕೋರಲಾಯಿತು.
ಬೆಳ್ತಂಗಡಿಗೆ ಬರುತ್ತಿದ್ದಂತೆ ಅವರನ್ನು ಸ್ವಾಗತಿಸಿದ ಪಕ್ಷದ ನಾಯಕರು, ಕಾರ್ಯಕರ್ತರು ಹೂವಿನ ಹಾರಗಳನ್ನು ಹಾಕಿ ಸ್ವಾಗತಿಸಿದರು. ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದವರೆಗೆ ಕಾರ್ಯಕರ್ತರಿಂದ ಬೃಹತ್ ಮೆರವಣಿಗೆ ಮೂಲಕ ಜೈಕಾರ ಮೊಳಗಿಸುತ್ತಾ ಅಕ್ಬರ್ ಬೆಳ್ತಂಗಡಿ ಹಾಗೂ ಅಲ್ಫೋನ್ಸ್ ಫ್ರಾಂಕೋ ಅವರನ್ನು ಕರೆತರಲಾಯಿತು. ರಸ್ತೆಯಿದ್ದಕ್ಕೂ ಸಾರ್ವಜನಿಕರಿಂದ ಹೂವಿನ ಹಾರ ಮತ್ತು ಶಾಲು ಹೊದಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ SDPI ಅಭ್ಯರ್ಥಿ ಅಲ್ಫೋನ್ಸ್ ಫ್ರಾಂಕೋ, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆ ಮಜಲ್, ಚಿಕ್ಕಮಗಳೂರು ಜಿಲ್ಲಾ ಅಧ್ಯಕ್ಷ ಗೌಸ್ ಮುನೀರ್ ಚಿಕ್ಕಮಗಳೂರು, ಪುತ್ತೂರು ಕ್ಷೇತ್ರ ಸಮಿತಿ ಅಧ್ಯಕ್ಷ ಹಾಜಿ ಇಬ್ರಾಹಿಂ ಸಾಗರ್, ಬೆಳ್ತಂಗಡಿ ಕ್ಷೇತ್ರ ಸಮಿತಿ ಅಧ್ಯಕ್ಷ ನವಾಜ್ ಶರೀಫ್ ಕಟ್ಟೆ, ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಿತೈಷಿಗಳು, ಅಭಿಮಾನಿಗಳು, ಮತದಾರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw




























