ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ: ಹಿಂದೂ ಜಾಗರಣಾ ವೇದಿಕೆ ಮಾಹಿತಿ ಆಧಾರಿಸಿ ಪೊಲೀಸರಿಂದ ದಾಳಿ - Mahanayaka

ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ: ಹಿಂದೂ ಜಾಗರಣಾ ವೇದಿಕೆ ಮಾಹಿತಿ ಆಧಾರಿಸಿ ಪೊಲೀಸರಿಂದ ದಾಳಿ

belthangady lodge
07/02/2023

ಬೆಳ್ತಂಗಡಿ: ಅನೈತಿಕ ಚಟುವಟಿಕೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಉಜಿರೆಯ ಲಾಡ್ಜ್ ವೊಂದಕ್ಕೆ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ಪೊಲೀಸ್ ದಾಳಿ ನಡೆದಿದ್ದು ಹಲವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಸಂಘಟನೆಯ ಕಾರ್ಯಕರ್ತರು  ಬೆಳ್ತಂಗಡಿ ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದು ಆ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಬಂಧಿತರಲ್ಲಿ 5 ಮಂದಿ ಮಹಿಳೆಯರು ಮತ್ತು ಇಬ್ಬರು ಪುರುಷರು ಸೇರಿದ್ದಾರೆ ಎಂದು ತಿಳಿದು ಬಂದಿದೆ

ನಿನ್ನೆಯಷ್ಟೆ (ಫೆ.6)ಬಂಟ್ವಾಳ ಡಿವೈಎಸ್ ಪಿ ನೇತೃತ್ವದ ತಂಡದಿಂದ ಉಜಿರೆಯ ಲಾಡ್ಜ್ ಗಳಿಗೆ ಸಾಮೂಹಿಕವಾಗಿ ಏಕಕಾಲದಲ್ಲಿ ದಾಳಿ ನಡೆದಿದ್ದು ಎಚ್ಚರಿಕೆ ನೀಡಿದ್ದರು.

ಅಲ್ಲದೆ ಮಂಗಳವಾರ ಬೆಳಿಗ್ಗೆಯಷ್ಟೇ  ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲಕರ ಸಭೆ ನಡೆಸಿ ಯಾವುದೇ ಕಾರಣಕ್ಕೂ ಅನೈತಿಕ ವ್ಯವಹಾರ ಮಾಡದಂತೆ ಎಚ್ಚರಿಕೆಯನ್ನು ನೀಡಿದ್ದರು. ಆದರೆ ಇದರ ಬೆನ್ನಲ್ಲೇ ಉಜಿರೆಯ ಎಂ ಎಸ್ ಎಸ್ ಲಾಡ್ಜ್ ನಲ್ಲಿ ಅಕ್ರಮ ವೇಶ್ಯಾವಾಟಿಕೆ ಈ ಬಗ್ಗೆ ಖಚಿತ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ತಕ್ಷಣ ಪೊಲೀಸರು ಲಾಡ್ಜ್ ಗೆ ದಾಳಿ ನಡೆಸಿ 5ಮಹಿಳೆಯರ ಸಹಿತ ಇಬ್ಬರು ಪುರುಷರನ್ನು ವಶಕ್ಕೆ ಪಡೆದಿದ್ದಾರೆ.

belthangady lodge

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ