ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೆಳ್ತಂಗಡಿಯ ಯುವಕ ಸಾವು - Mahanayaka

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಬೆಳ್ತಂಗಡಿಯ ಯುವಕ ಸಾವು

sanal antony
21/02/2026

ಬೆಳ್ತಂಗಡಿ: ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ ನಿವಾಸಿ ಸನಲ್ ಆಂಟನಿ (25) ಅವರು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ (ಫೆಬ್ರವರಿ 20) ಮೃತಪಟ್ಟಿದ್ದಾರೆ.

ಫೆಬ್ರವರಿ 14ರಂದು ಬೆಂಗಳೂರಿನ ಬೆಳ್ಳೂರು ಕ್ರಾಸ್ ಸಮೀಪ ಸನಲ್ ಅವರು ಪ್ರಯಾಣಿಸುತ್ತಿದ್ದ ಬೈಕ್ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಅವರ ತಲೆಗೆ ಮತ್ತು ದೇಹದ ಇತರ ಭಾಗಗಳಿಗೆ ಗಂಭೀರ ಗಾಯಗಳಾಗಿದ್ದವು.

ತಕ್ಷಣವೇ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕಳೆದ ಆರು ದಿನಗಳಿಂದ ಸಾವು–ಬದುಕಿನ ನಡುವೆ ಹೋರಾಡುತ್ತಿದ್ದ ಅವರು, ಫೆಬ್ರವರಿ 20ರಂದು ಕೊನೆಯುಸಿರೆಳೆದಿದ್ದಾರೆ.

ಮೃತ ಯುವಕ ತಂದೆ, ತಾಯಿ, ಪತ್ನಿ ಹಾಗೂ ಒಂದು ಮಗುವನ್ನು ಅಗಲಿದ್ದಾರೆ. ಯುವಕನ ಅಕಾಲಿಕ ನಿಧನದಿಂದ ತೋಟತ್ತಾಡಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ