ಪಶ್ಚಿಮ ಬಂಗಾಳ ಪೊಲೀಸ್ ಮಹಾನಿರ್ದೇಶಕರಾಗಿ ಐಪಿಎಸ್ ರಾಜೀವ್ ಕುಮಾರ್ ನೇಮಕ

28/12/2023
ಕೋಲ್ಕತಾದ ಮಾಜಿ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರನ್ನು ಪಶ್ಚಿಮ ಬಂಗಾಳದ ಹೊಸ ಪೊಲೀಸ್ ಮಹಾನಿರ್ದೇಶಕ ಮತ್ತು ಇನ್ಸ್ ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಆಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ನಿವೃತ್ತರಾದ ಮನೋಜ್ ಮಾಳವೀಯ ಅವರ ಸ್ಥಾನಕ್ಕೆ ಈ ಆಯ್ಕೆ ನಡೆದಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತರಾಗಿದ್ದ ರಾಜೀವ್ ಕುಮಾರ್ ಅವರು 1989ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
ಕುಮಾರ್ ಅವರು ಪಶ್ಚಿಮ ಬಂಗಾಳ ಪೊಲೀಸ್ ಪಡೆಯ ಉನ್ನತ ಪೊಲೀಸ್ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಅವರು ಈ ಹಿಂದೆ ರಾಜ್ಯ ಅಪರಾಧ ತನಿಖಾ ಇಲಾಖೆಯ (ಸಿಐಡಿ) ಹೆಚ್ಚುವರಿ ಡಿಜಿಪಿಯಾಗಿ ಸೇವೆ ಸಲ್ಲಿಸಿದ್ದರು. 2019 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಅವರನ್ನು ಸಿಐಡಿ ಎಡಿಜಿ ಆಗಿ ವರ್ಗಾಯಿಸಲಾಗಿತ್ತು.