ಆರ್ಜಿ ಕಾರ್ ಅಪರಾಧಿಗೆ ಮರಣದಂಡನೆ ವಿಧಿಸಲು ಬಂಗಾಳ ಸರ್ಕಾರ ಕೋರಲಿದೆ: ಮಮತಾ ಬ್ಯಾನರ್ಜಿ ಹೇಳಿಕೆ

ಕೋಲ್ಕತಾದ ಆರ್ಜಿ ಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿ ಸಂಜಯ್ ರಾಯ್ ಗೆ ಮರಣದಂಡನೆ ವಿಧಿಸುವಂತೆ ಪಶ್ಚಿಮ ಬಂಗಾಳ ಸರ್ಕಾರ ಕೋರಲಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ. ಕಳೆದ ವರ್ಷ ಆಗಸ್ಟ್ 9 ರಂದು ಕೋಲ್ಕತ್ತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಭೀಕರ ಅತ್ಯಾಚಾರ-ಕೊಲೆ ಪ್ರಕರಣದ ಏಕೈಕ ಆರೋಪಿ ರಾಯ್ ಗೆ ಇಂದು ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.
“ಇದು ಮರಣದಂಡನೆಗೆ ಅರ್ಹವಾದ ಘೋರ ಅಪರಾಧ ಎಂದು ನಾನು ಬಲವಾಗಿ ಭಾವಿಸುತ್ತೇನೆ. ಅಪರಾಧಿಗೆ ಮರಣದಂಡನೆ ವಿಧಿಸುವಂತೆ ನಾವು ಈಗ ಹೈಕೋರ್ಟ್ನಲ್ಲಿ ಮನವಿ ಮಾಡುತ್ತೇವೆ” ಎಂದು ಬ್ಯಾನರ್ಜಿ ಎಕ್ಸ್ ಪೋಸ್ಟ್ ನಲ್ಲಿ ಬರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj