ಬಂಗಾಳ ಶಾಲಾ ಉದ್ಯೋಗ ಹಗರಣ: ತೃಣಮೂಲ ಶಾಸಕನಿಗೆ ವಿಚಾರಣೆಗೆ ಇಡಿ ಸಮನ್ಸ್

04/08/2024

ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿನ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಜಿಬನ್ ಕೃಷ್ಣ ಸಹಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ಜಾರಿ ಮಾಡಿದೆ.
ಸೋಮವಾರ ಬೆಳಿಗ್ಗೆ 11 ಗಂಟೆಗೆ ಏಜೆನ್ಸಿಯ ಕೊಲ್ಕತ್ತಾ ಕಚೇರಿಯಲ್ಲಿ ಇಡಿ ಅಧಿಕಾರಿಗಳ ಮುಂದೆ ಹಾಜರಾಗುವಂತೆ ಸಹಾ ಅವರಿಗೆ ಸೂಚಿಸಲಾಗಿದೆ.

ಬಹುಕೋಟಿ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಸಹಾ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಏಪ್ರಿಲ್ 17, 2023 ರಂದು ಅವರ ಬಾರ್ವಾನ್ ಮನೆಯಿಂದ ಬಂಧಿಸಿತ್ತು. ಆದಾಗ್ಯೂ, ನಂತರ ಅವರನ್ನು ತನಿಖಾ ಸಂಸ್ಥೆ ಬಿಡುಗಡೆ ಮಾಡಿತು.

ಜುಲೈ 2022 ರಲ್ಲಿ ಅಕ್ರಮ ಶಿಕ್ಷಕರ ನೇಮಕಾತಿಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ರಾಜ್ಯದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಮತ್ತು ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗದ ಹಲವಾರು ಅಧಿಕಾರಿಗಳನ್ನು ಸಿಬಿಐ ಬಂಧಿಸಿದ ನಂತರ ಈ ಹಗರಣ ಬೆಳಕಿಗೆ ಬಂದಿದೆ.

ಈ ನಿಟ್ಟಿನಲ್ಲಿ ಕೋಲ್ಕತಾದಲ್ಲಿ ಪಾರ್ಥ ಚಟರ್ಜಿ ಅವರ ಆಪ್ತರೊಬ್ಬರ ಮೇಲೆ ಇಡಿ ದಾಳಿ ನಡೆಸಿದೆ. ಚಟರ್ಜಿ ಅವರ ಆಪ್ತೆ ಅರ್ಪಿತಾ ಮುಖರ್ಜಿ ಅವರ ನಿವಾಸದಿಂದ ಸುಮಾರು 21 ಕೋಟಿ ನಗದು ಮತ್ತು 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆಭರಣಗಳನ್ನು ಕೇಂದ್ರ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version