ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ | ಫ್ಲ್ಯಾಟ್ ನಿಂದ ಹೊರಗೆ ಓಡಿ ಬಂದ ನಿವಾಸಿಗಳು - Mahanayaka
10:40 AM Saturday 23 - August 2025

ಬೆಂಗಳೂರಿನ ಫ್ಲ್ಯಾಟ್ ನಲ್ಲಿ ಬೆಂಕಿ ಅವಘಡ | ಫ್ಲ್ಯಾಟ್ ನಿಂದ ಹೊರಗೆ ಓಡಿ ಬಂದ ನಿವಾಸಿಗಳು

bangalore
17/11/2021


Provided by

ಬೆಂಗಳೂರು: ನಗರದ ಎಲೆಕ್ಟ್ರಾನಿಕ್ ಸಿಟಿಯ ವಸುಂಧರಾ ಲೇಔಟ್ ನ ಫ್ಲ್ಯಾಟ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಫ್ಲ್ಯಾಟ್ ನಲ್ಲಿದ್ದ ಜನರು ಆತಂಕದಿಂದ ಹೊರಗೆ ಓಡಿಕೊಂಡು ಬಂದಿದ್ದಾರೆ.

ಇತ್ತೀಚೆಗಷ್ಟೆ ಬೆಂಗಳೂರಿನಲ್ಲಿ ನಡೆದ ಬೆಂಕಿ ಅನಾಹುತಗಳು ಜನರ ಮನಸ್ಸಿನಿಂದ ಮಾಸುವ ಮುನ್ನವೇ ಇದೀಗ ಮತ್ತೊಂದು ದುರ್ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ಸಿಲಿಂಡರ್ ಸ್ಫೋಟದಿಂದಾಗಿ ಬೆಂಕಿ ಹೊತ್ತಿಕೊಂಡಿದೆಯೇ ಎನ್ನುವ ಅನುಮಾನ ಸದ್ಯ ಮೂಡಿದೆ. ಘಟನೆಯಿಂದಾಗಿ ಫ್ಲ್ಯಾಟ್ ನಲ್ಲಿದ್ದ ಪೀಠೋಪಕರಣಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ಬೈಕ್—ಲಾರಿ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರನ ದಾರುಣ ಸಾವು

ಲೈಂಗಿಕ ದೌರ್ಜನ್ಯ: ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಶಿಕ್ಷಕನ ಸಹಿತ ಇಬ್ಬರ ಬಂಧನ!

ಶಾಕಿಂಗ್ ನ್ಯೂಸ್: 2 ಡೋಸ್ ಕೊವಿಡ್ ಲಸಿಕೆ ಪಡೆದಿದ್ದರೂ ವ್ಯಕ್ತಿ ಕೊರೊನಾಕ್ಕೆ  ಬಲಿ

ವಿಶಾಲ್ ರನ್ನು ನೋಡಿದಾಗ ನನ್ನ ತಮ್ಮನನ್ನು ನೋಡಿದ ಹಾಗೆಯೇ ಆಗುತ್ತದೆ, ಅಪ್ಪು ಬಳಿಯೂ ಇದನ್ನು ಹೇಳಿದ್ದೆ | ಶಿವರಾಜ್ ಕುಮಾರ್

ವಾಯು ಮಾಲಿನ್ಯದಿಂದ ಕಂಗೆಟ್ಟ ದೆಹಲಿ: ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮದ್ರಸದಿಂದ ಬರುತ್ತಿದ್ದ ಬಾಲಕನ ಮೇಲೆ ಎರಗಿದ ಹುಚ್ಚುನಾಯಿ!

ಇತ್ತೀಚಿನ ಸುದ್ದಿ