ಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ ನಲ್ಲಿ ಮಹಿಳೆಯ ಶವ ಪತ್ತೆ - Mahanayaka

ಬೆಂಗಳೂರು: ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ ನಲ್ಲಿ ಮಹಿಳೆಯ ಶವ ಪತ್ತೆ

bengaluru
14/03/2023

ಬೆಂಗಳೂರಿನ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ಲಾಸ್ಟಿಕ್ ಡ್ರಮ್‌ ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಎರಡು ತಿಂಗಳ ಹಿಂದೆ ಯಶವಂತಪುರ ರೈಲು ನಿಲ್ದಾಣದ ಡ್ರಮ್‌ ನಲ್ಲಿ ಇದೇ ರೀತಿ ಮಹಿಳೆಯೊಬ್ಬರ ಶವ ಪತ್ತೆಯಾಗಿತ್ತು.

ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಮೂವರು ದುಷ್ಕರ್ಮಿಗಳು ಶವವಿರುವ ನೀಲಿ ಡ್ರಮ್ ಅ​ನ್ನು ಆಟೋದಲ್ಲಿ‌ ತಂದು ನಗರದ ಬೈಯಪ್ಪನಹಳ್ಳಿ ರೈಲು ನಿಲ್ದಾಣದ ಪ್ರವೇಶ ದ್ವಾರದ ಬಳಿ ಇಟ್ಟು ಹೋಗಿದ್ದಾರೆ. ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶವವನ್ನು ಬಟ್ಟೆಯಲ್ಲಿ ಸುತ್ತಿ ಡ್ರಮ್ ನಲ್ಲಿ ಹಾಕಿ ಮುಚ್ಚಳದಿಂದ ಮುಚ್ಚಲಾಗಿತ್ತು.

ಶವ ಯಾರದು ಎಂಬ ಬಗ್ಗೆ ಗುರುತು ಸಿಕ್ಕಿಲ್ಲ, ಸುಮಾರು 31 ರಿಂದ 35 ವರ್ಷ ವಯಸ್ಸಿನವರೆಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ‌ ಮಾತನಾಡಿದ ರೈಲ್ವೇ ಎಸ್ಪಿ ಸೌಮ್ಯಲತಾ, “ನಮಗೆ ನೀಲಿ ಡ್ರಮ್​ನಿಂದ ಕೊಳೆತ ವಾಸನೆ ಬರುತ್ತಿದೆ ಎಂದು ದೂರವಾಣಿ ಕರೆ ಬಂದಿತ್ತು. ಸ್ಥಳಕ್ಕೆ ಬಂದು ಪರಿಶೀಲಿಸಿದಾಗ ಶವ ಇರುವುದು ಗೊತ್ತಾಗಿದೆ” ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ