ಸೆ.26ರಂದು ಬೆಂಗಳೂರು ಬಂದ್‌ ಗೆ ಕರೆ - Mahanayaka

ಸೆ.26ರಂದು ಬೆಂಗಳೂರು ಬಂದ್‌ ಗೆ ಕರೆ

banglore bandh
25/09/2023


Provided by

ಬೆಂಗಳೂರು: ಕಾವೇರಿ ನೀರು ನಿರ್ವಹಣಾ ಮಂಡಳಿ ಆದೇಶವನ್ನು ಖಂಡಿಸಿ ಇದೇ ಸೆ. 26 ರಂದು ಬೆಂಗಳೂರು ಬಂದ್‌ಗೆ ಎಲ್ಲಾ ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಮತ್ತು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಕರೆ ನೀಡಲಾಗಿದೆ.

ಕೂಡಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು.ರಾಜ್ಯ ಸರ್ಕಾರ ಕೂಡಲೇ  ವಿಧಾನಸಭೆ ಅಧಿವೇಶನ ಕರೆದು ಸಮಗ್ರ ಚರ್ಚಿಸಿ, ಸಂಕಷ್ಟ ಸೂತ್ರ ಜಾರಿ ಮಾಡುವ ತನಕ ನೀರು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಕೇಂದ್ರ ಸರ್ಕಾರ ಮತ್ತು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ನೀಡಬೇಕು.

ಕಾವೇರಿ ನೀರು ನಿರ್ವಹಣಾ ಮಂಡಳಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವನ್ನು ಕೂಡಲೇ ರದ್ದು ಪಡಿಸಿ,  ಸ್ವತಂತ್ರ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ನೀರು ನಿರ್ವಹಣಾ ಮಂಡಳಿ ರಚಿಸಬೇಕು. ಈ ಮಂಡಳಿಯಲ್ಲಿ ನಾಲ್ಕು ರಾಜ್ಯಗಳ  ಪರಿಣಿತರು  ನೀರಾವರಿ ತಜ್ಞರು, ರೈತ ಪ್ರತಿನಿಧಿಗಳು ಎಲ್ಲರನ್ನು ಒಳಗೊಂಡಂತೆ ಮಂಡಳಿ ರಚನೆ ಮಾಡಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಬೇಕು ಎಂಬ ಬೇಡಿಕೆ ಈ ಸಂಘಟನೆಗಳದ್ದಾಗಿದೆ.

ಇತ್ತೀಚಿನ ಸುದ್ದಿ