ರಿಲೀಫ್: ಮಾನನಷ್ಟ ಮೊಕದ್ದಮೆ ಕೇಸ್; ರಾಹುಲ್ ಗಾಂಧಿಗೆ ಜಾಮೀನು; ಕೋರ್ಟ್ ಹೇಳಿದ್ದೇನು..?

07/06/2024

ಬಿಜೆಪಿ ಸರ್ಕಾರ ಮಾಡಿದೆ ಎನ್ನಲಾದ ಶೇಕಡಾ 40 ಕಮಿಷನ್ ವಿರುದ್ಧ ಜಾಹೀರಾತು ನೀಡಿದ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಸ್ಥಳೀಯ ಜನಪ್ರತಿನಿಧಿಗಳ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ. ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಹಿತ ಕಾಂಗ್ರೆಸ್ ನಾಯಕರ ವಿರುದ್ಧ ಬಿಜೆಪಿ ಮಾನನಷ್ಟ ಮೊಕದ್ದಮೆ ದಾಖಲಿಸಿತ್ತು.

ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಮೊದಲ ಆರೋಪಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಕ್ರಮವಾಗಿ 2, 3 ಮತ್ತು 4ನೇ ಆರೋಪಿಗಳಾಗಿದ್ದಾರೆ.

ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೂನ್ 1ರಂದು ವಿಚಾರಣೆಗೆ ಹಾಜರಾಗಿದ್ದರು. ಹೀಗಾಗಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ.

‘2023ರಲ್ಲಿ ಪ್ರಮುಖ ದಿನಪತ್ರಿಕೆಗಳಲ್ಲಿ ರಾಜ್ಯ ಬಿಜೆಪಿ ಸರ್ಕಾರ ಶೇ.40ರಷ್ಟು ಕಮಿಷನ್ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ರೂ. 1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ʼಭ್ರಷ್ಟ ಸರ್ಕಾರ’ ಎಂದು ಆರೋಪಿಸಲಾಗಿತ್ತು.
‘ಈ ಆರೋಪಕ್ಕೆ ಪಿರ್ಯಾದುದಾರರೇ ಇಲ್ಲ. ಇದು ರಾಷ್ಟ್ರೀಯ ಪಕ್ಷವೊಂದರ ವಿರುದ್ಧ ಮಾಡಲಾಗಿರುವ ಆಧಾರ ರಹಿತ, ಪೂರ್ವಗ್ರಹ ಪೀಡಿತ ಮತ್ತು ಮಾನಹಾನಿಕರ ಆರೋಪ’ ಎಂದು ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್.ಕೇಶವಪ್ರಸಾದ್ ಖಾಸಗಿ ದೂರು ಸಲ್ಲಿಸಿದ್ದರು.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version