ಬೆಂಗಳೂರು: ಅಗ್ನಿ ದುರಂತದಲ್ಲಿ ಒಂದೇ ಕುಟುಂಬದ ನಾಲ್ವರ ಸಹಿತ ಐದು ಮಂದಿ ಸಾವು

ಬೆಂಗಳೂರು: ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿರುವಂತಹ ಘಟನೆ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ನಗರ್ತಪೇಟೆಯಲ್ಲಿ ನಡೆದಿದೆ.
ದುರಂತದಲ್ಲಿ ಮದನ್ (38), ಪತ್ನಿ ಸಂಗೀತಾ (33) ಮಿತೇಶ್ (8), ವಿಹಾನ್ (5) ಒಂದೇ ಕುಟುಂಬದವರು ಸಜೀವ ದಹನವಾಗಿದ್ದಾರೆ, ಮತ್ತೊಂದು ಮಹಡಿಯಲ್ಲಿ ಸುರೇಶ್ ಎಂಬವರೂ ಸುಟ್ಟು ಕರಕಲಾಗಿದ್ದಾರೆ.
ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಗ್ರೌಂಡ್ ಫ್ಲೋರ್ ನಲ್ಲಿರುವ ಗೋಡೌನ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಅದು ಮೇಲಿನ ಫ್ಲೋರ್ ಗಳಿಗೆ ಆವರಿಸಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಟ್ಟಡದಲ್ಲಿದ್ದ ಬಹುತೇಕ ಜನ ಓಡಿ ಹೋಗಿದ್ದಾರೆ. ಆದರೆ ದುರಾದೃಷ್ಟವಂತ ಕುಟುಂಬ ಬೆಂಕಿಗೆ ಆಹುತಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD