ಮಹಿಳೆ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿ, ಆತ್ಮಹತ್ಯೆಗೆ ಶರಣಾದ ಮನೆಕೆಲಸದವ!

stop rape
01/02/2026

ಬೆಂಗಳೂರು: ಸಿಟಿ ಸಿಲ್ಕ್ ಬೋರ್ಡ್ ಸಮೀಪದ ಕೆಎಎಸ್ ಕಾಲೋನಿಯಲ್ಲಿ ಭಾನುವಾರ ಬೆಳ್ಳಂಬೆಳಿಗ್ಗೆ ಅತ್ಯಂತ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. 65 ವರ್ಷದ ಸರಿತಾ ಎಂಬ ಮಹಿಳೆಯನ್ನು ಮನೆಯ ಕೆಲಸಗಾರನೇ ಅತ್ಯಾಚಾರವೆಸಗಿ ಬರ್ಬರವಾಗಿ ಕೊಲೆ ಮಾಡಿದ್ದು, ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಯ ವಿವರ: ಮೃತ ವೃದ್ಧೆ ಸರಿತಾ ಅವರ ಪತಿ ಉದ್ಯೋಗ ನಿಮಿತ್ತ ದುಬೈಗೆ ತೆರಳಿದ್ದರು. ಇಂದು (ಫೆಬ್ರವರಿ 1) ಮುಂಜಾನೆ ಸುಮಾರು 4:30ಕ್ಕೆ ಅವರು ವಿದೇಶದಿಂದ ಮನೆಗೆ ವಾಪಸ್ಸಾಗಿದ್ದಾರೆ. ಈ ವೇಳೆ ಮನೆಯ ಮೊದಲ ಮಹಡಿಯಲ್ಲಿದ್ದ ಮಗಳು ಬಾಗಿಲು ತೆರೆದು ಮತ್ತೆ ತನ್ನ ಕೋಣೆಗೆ ಮಲಗಲು ತೆರಳಿದ್ದಾಳೆ. ಪತಿ ಕೆಳಮಹಡಿಯಲ್ಲಿದ್ದ ಸರಿತಾ ಅವರ ಕೋಣೆಗೆ ಹೋದಾಗ ಹೆಂಡತಿಯ ಮೃತದೇಹ ಕಂಡುಬಂದಿದೆ.

ಕೊಲೆ ಮಾಡಿದ ಆರೋಪಿಯನ್ನು 50 ವರ್ಷದ ದೇವರಾಜು ಎಂದು ಗುರುತಿಸಲಾಗಿದ್ದು, ಈತ ಅದೇ ಮನೆಯಲ್ಲಿ ಕೆಲಸಕ್ಕಿದ್ದನು. ಸರಿತಾ ಅವರ ಮೇಲೆ ಅತ್ಯಾಚಾರವೆಸಗಿ ಬಳಿಕ ಅವರನ್ನು ಉಸಿರುಗಟ್ಟಿಸಿ ಅಥವಾ ಹಲ್ಲೆ ನಡೆಸಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಈ ಘೋರ ಕೃತ್ಯ ಎಸಗಿದ ನಂತರ ಆರೋಪಿ ದೇವರಾಜು ಕೂಡ ಅದೇ ಮನೆಯಲ್ಲಿ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ.

ಘಟನೆ ನಡೆದ ವೇಳೆ ಮಗಳು ಮೊದಲ ಮಹಡಿಯಲ್ಲಿದ್ದರೂ ಕೆಳಮಹಡಿಯಲ್ಲಿ ನಡೆದ ಈ ಪೈಶಾಚಿಕ ಕೃತ್ಯದ ಬಗ್ಗೆ ಆಕೆಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಮೈಕೋ ಲೇಔಟ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಎರಡೂ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version