12ನೇ ತರಗತಿ ಪಾಸಾದವರಿಗೆ ಜಿಲ್ಲಾ ಪಂಚಾಯತ್ ನಲ್ಲಿದೆ ಉದ್ಯೋಗ: ಅರ್ಜಿ ಸಲ್ಲಿಸಲು ಕೇವಲ 3 ದಿನ ಬಾಕಿ

Bengaluru Jilla Panchayat Recruitment 2024 – ಬೆಂಗಳೂರು ನಗರ ಜಿಲ್ಲಾ ಪಂಚಾಯತಿ ಅಡಿಯಲ್ಲಿ ದ್ವಿತೀಯ ಪಿಯುಸಿ ಪಾಸಾದವರಿಗೆ ಹಲವು ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯು ಅಧಿಕೃತ ಅಧಿಸೂಚನೆ (Official Notification) ಹೊರಡಿಸಿದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಮಾಹಿತಿಯನ್ನು ಇಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಎಲ್ಲಾ ಅರ್ಹತೆಗಳನ್ನು, ಹುದ್ದೆಗಳ ವಿವರಗಳನ್ನು ಹಾಗೂ ನೇಮಕಾತಿಯ ವಿವಿಧ ಮಾಹಿತಿಯನ್ನು ತಿಳಿದುಕೊಳ್ಳಲು ಅಭ್ಯರ್ಥಿಗಳು ಮೊದಲು ಕೆಳಗಿನ ಮಾಹಿತಿಯನ್ನು ತಿಳಿದುಕೊಳ್ಳಿ, ನಂತರದಲ್ಲಿ ಹೆಚ್ಚಿನ ಮಾಹಿತಿ ಬೇಕಾದಲ್ಲಿ ನೀವು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.
Bengaluru Jilla Panchayat Recruitment 2024, Vacancy Details
ಬೆಂಗಳೂರು ನಗರ ಜಿಲ್ಲಾ ಪಂಚಾಯತಿಯ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಯ, ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಖಾಲಿ ಇರುವ ಮೇಲ್ವಿಚಾರಕರು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಒಟ್ಟು ಆರು ಹುದ್ದೆಗಳು ಖಾಲಿ ಇವೆ.
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ – ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪಾಸ್ ಆಗಿದ್ದು ಅದರ ಜೊತೆಗೆ ಸರ್ಟಿಫಿಕೇಶನ್ ಇನ್ ಲೈಬ್ರರಿ ಕೋರ್ಸ್ (Certification Course in Library Science) ಮುಗಿಸಿರಬೇಕು.
ವಯೋಮಿತಿ ಅರ್ಹತೆ — ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಕನಿಷ್ಠ 18 ರಿಂದ 35 ವರ್ಷದ ವಯೋಮಿತಿಯಲ್ಲಿರಬೇಕು.
ವೇತನ ಶ್ರೇಣಿ – ಗ್ರಂಥಾಲಯ ಮೇಲ್ವಿಚಾರಕರಾಗಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹15,196.72 ರೂಪಾಯಿ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಹೇಗೆ ಸಲ್ಲಿಸಬೇಕು?
ಅರ್ಹರಿವ ಎಲ್ಲಾ ಅಭ್ಯರ್ಥಿಗಳು ಕೆಳಗಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯಿಂದ ಡೌನ್ಲೋಡ್ ಮಾಡಿಕೊಂಡು ಸರಿಯಾದ ಮಾಹಿತಿಯೊಂದಿಗೆ ಭರ್ತಿ ಮಾಡಿ ಹಾಗೂ ದೃಢೀಕೃತ ದಾಖಲಾತಿಗಳೊಂದಿಗೆ ಕೆಳಗಿನ ವಿಳಾಸಕ್ಕೆ ಆಗಸ್ಟ್ 13ನೇ ತಾರೀಕಿನ ಒಳಗಾಗಿ ಕಳುಹಿಸಬೇಕು.
ವಿಳಾಸ : Respective Gram Panchayat Office, Bangalore Urban Karnataka
ಅಧಿಕೃತ ಜಾಲತಾಣ : https://zpbengaluruurban.karnataka.gov.in/
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: