12:37 AM Saturday 18 - October 2025

ಬೇಸಿಗೆ ರಜೆಯಲ್ಲಿ ಎಚ್ಚರಿಗೆ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸಲಹೆ!

dayanand b
09/04/2025

ಬೆಂಗಳೂರು: ಬೇಸಿಗೆ ರಜೆಯ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಬೆಂಗಳೂರು ನಿವಾಸಿಗಳಿಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಸಲಹೆ ನೀಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಪರಾಧ ಕೃತ್ಯಗಳ ಮತ್ತು ಕಳ್ಳತನ ಪ್ರಕರಣಗಳ ಬಗ್ಗೆ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಸುರಕ್ಷತಾ ಕ್ರಮಗಳನ್ನ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದಾರೆ.

ಬೇಸಿಗೆ ರಜೆಯಲ್ಲಿ ಮನೆಗೆ ಬೇಗ ಹಾಕಿ ಊರಿಗೆ ಅಥವಾ ಪ್ರವಾಸಕ್ಕೆ ತೆರಳುವ ಮುನ್ನ ಬೆಂಗಳೂರು ನಿವಾಸಿಗಳು ಹೆಚ್ಚಿನ ಎಚ್ಚರಿಕೆ ವಹಿಸಬೇಕು,  ದೀರ್ಘ ಅವಧಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಮನೆಯಲ್ಲಿ ಬೆಳೆಬಾಳುವ ವಸ್ತುಗಳನ್ನು ಇಡಬೇಡಿ. ಅವುಗಳನ್ನು ಬ್ಯಾಂಕಿನಲ್ಲಿ ಅಥವಾ ಲಾಕರ್‌ಗಳಲ್ಲಿ ಇಡುವುದು ಸೂಕ್ತ ಎಂದು ಅವರ ಸಲಹೆ ನೀಡಿದ್ದಾರೆ.

ಮನೆಗೆ ಗುಣಮಟ್ಟದ ಬೀಗ ಅಳವಡಿಸಬೇಕು. ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ. ಬೀಗದ ಕೀಯನ್ನು ಮನೆ ಪಕ್ಕದಲ್ಲಿ ಎಲ್ಲೋ ಇಟ್ಟು ಹೋಗುವ ಅಭ್ಯಾಸ ಮಾಡಬೇಡಿ. ಒಂದಕ್ಕಿಂತ ಹೆಚ್ಚು ದಿನ ಪ್ರವಾಸ ಹೋಗುವುದಿದ್ದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ತೆರಳಿ. ಇಂಥ ಸಂದರ್ಭದಲ್ಲಿ ಆ ಪ್ರದೇಶದಲ್ಲಿ ಗಸ್ತು ನಡೆಸುವುದು ಪೊಲೀಸರಿಗೂ ಸುಲಭವಾಗುತ್ತದೆ ಎಂದು ದಯಾನಂದ್ ಹೇಳಿದ್ದಾರೆ.

ಮನೆ ಕೆಲಸದವರನ್ನು ನೇಮಿಸಿಕೊಳ್ಳುವ ಮುನ್ನ ಅವರ ಪೂರ್ವಾಪರವನ್ನು ಸರಿಯಾಗಿ ತಿಳಿದುಕೊಳ್ಳಿ. ಮನೆಯಲ್ಲಿ ಎಲ್ಲಿಂದರಲ್ಲಿ ಕೆಲಸದವರನ್ನು ಓಡಾಡಲು ಬಿಡಬೇಡಿ. ಬೆಲೆಬಾಳುವ ವಸ್ತುಗಳನ್ನು ಅವರಿಗೆ ಕಾಣುವಂತೆ ಇಡುವುದು, ಪ್ರದರ್ಶಿಸುವುದು ಮಾಡಬೇಡಿ ಎಂದು ಪೊಲೀಸ್ ಆಯುಕ್ತರು ಸಲಹೆಗಳನ್ನು ನೀಡಿದ್ದಾರೆ.

ಬೇಸಿಗೆ ರಜೆ ಸಂದರ್ಭದಲ್ಲಿ ಕಳ್ಳರ ಗ್ಯಾಂಗ್ ​​ಗಳು ಇನ್ನಷ್ಟು ಸಕ್ರಿಯವಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಪೊಲೀಸರು ಸಾರ್ವಜನಿಕರಿಗೆ ಸಲಹೆ ಸೂಚನೆಗಳನ್ನು ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version