ಸಾರ್ವಜನಿಕರ ಪ್ರಶ್ನೆಗೆ ಉತ್ತರಿಸಲಾಗದೇ ಸಭೆಯಿಂದ ಹೊರ ನಡೆದ ತೇಜಸ್ವಿ ಸೂರ್ಯ: ವಿಡಿಯೋ ವೈರಲ್

Tejasvi Surya
16/04/2024

ಬೆಂಗಳೂರು: ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನಿಯಮಿತದ ಬಹುಕೋಟಿ ಹಗರಣದಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡ ಸಂತ್ರಸ್ತರ ಪ್ರಶ್ನೆಗಳಿಗೆ ಉತ್ತರಿಸಲಾಗದೇ ಬೆಂಗಳೂರು ದಕ್ಷಿಣ ಕ್ಷೇತ್ರದ ಹಾಲಿ ಸಂಸದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪ್ರಚಾರ ಸಭೆಯಿಂದ ಅರ್ಧದಿಂದಲೇ ಎದ್ದು ತೆರಳಿದ ಘಟನೆ ನಡೆದಿದೆ.

ಬೆಂಗಳೂರು ದಕ್ಷಿಣದ ಹಾಲಿ ಸಂಸದ ತೇಜಸ್ವಿ ಸೂರ್ಯ ಅವರು ಶನಿವಾರ (ಏಪ್ರಿಲ್ 13) ಬೆಂಗಳೂರಿನಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಿಂದ ನಿರ್ಗಮಿಸಬೇಕಾಯಿತು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಬಹುಕೋಟಿ ಹಗರಣದಲ್ಲಿ ಹಣ ಕಳೆದುಕೊಂಡ ಸಂತ್ರಸ್ತರು ಹಣ ಕಳೆದುಕೊಂಡ ವಿಚಾರವಾಗಿ  ಸಂಸದ ತೇಜಸ್ವಿ ಸೂರ್ಯ ಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ.  ಈ ವೇಳೆ ಮಾತಿನ ಸಂಘರ್ಷ ಏರ್ಪಟ್ಟಿದೆ.

ಪಿಟಿಐ ಹಂಚಿಕೊಂಡ ಸಭೆಯ ವಿಡಿಯೋದಲ್ಲಿ ತೇಜಸ್ವಿ ಸೂರ್ಯ ಅವರನ್ನು ಅವರ ಸಂಗಡಿಗರು ಸ್ಥಳದಿಂದ ಹೊರಗೆ ಕರೆದೊಯ್ಯುವುದನ್ನು ಕಾಣಬಹುದಾಗಿದೆ. ಅವರು ದೂರ ಹೋಗುತ್ತಿದ್ದರೂ ಸಹ, ತೇಜಸ್ವಿ ಸೂರ್ಯ ಮತ್ತು ಕೆಲವು ಹೂಡಿಕೆದಾರರ ನಡುವೆ ವಾಕ್ಸಮರ ನಡೆಸುತ್ತಿರುವ ದೃಶ್ಯ ಕಂಡು ಬಂತು.

ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ನ ಆಪಾದಿತ ವಂಚನೆಯಿಂದ ಸಂತ್ರಸ್ತರಾದ ಹೂಡಿಕೆದಾರರು ತಮ್ಮ ನಷ್ಟವನ್ನು ಸರಿದೂಗಿಸಲು ವಿಳಂಬವಾಗುತ್ತಿರುವ ಬಗ್ಗೆ ತೇಜಸ್ವಿ ಸೂರ್ಯಗೆ ಸಂತ್ರಸ್ತರು ಪ್ರಶ್ನೆ ಕೇಳಿದ್ದು, ಈ ಪ್ರಶ್ನೆಗೆ ಅವರು ಉತ್ತರಿಸಲು ಸಾಧ್ಯವಾಗದ ವೇಳೆ ಮಾತಿನ ಸಂಘರ್ಷ ಏರ್ಪಟ್ಟಿದೆ ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version