ಬೆಂಗಳೂರಿಗರೇ ಗಮನಿಸಿ:  ಸ್ವಾತಂತ್ರ್ಯೋತ್ಸವ  ಹಿನ್ನೆಲೆ  ಸಂಚಾರ ಮಾರ್ಗ ಬದಲಾವಣೆ

traffic bangalore
14/08/2026

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶನಿವಾರ (ಆಗಸ್ಟ್ 15) ವಿಧಾನಸೌಧದ ಮುಂಭಾಗದಲ್ಲಿ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ‘ಫ್ರೀಡಂ ಹಬ್ಬ’ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಹಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದು, ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ.

ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ವಿಧಾನಸೌಧ ಸುತ್ತಮುತ್ತಲಿನ ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನದಲ್ಲಿ ಬದಲಾವಣೆ ಮಾಡಲಾಗಿದೆ:

ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರೋ ನಿಲ್ದಾಣ (ವಿಧಾನಸೌಧ) ದಲ್ಲಿ ಬೆಳಗ್ಗೆ 10:00 ಗಂಟೆಯಿಂದ ರಾತ್ರಿ 9:30 ರವರೆಗೆ ಸಾರ್ವಜನಿಕರ ಪ್ರವೇಶ ಮತ್ತು ನಿರ್ಗಮನವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುವುದು.

ಪ್ರಯಾಣಿಕರು ಸಮೀಪದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ ಅಥವಾ ಸರ್‌ ಎಂ. ವಿಶ್ವೇಶ್ವರಯ್ಯ ಮೆಟ್ರೋ ನಿಲ್ದಾಣ (ಸೆಂಟ್ರಲ್ ಕಾಲೇಜು) ಬಳಸುವಂತೆ ಸೂಚಿಸಲಾಗಿದೆ.

ವಿಧಾನಸೌಧದ ಸುತ್ತಮುತ್ತಲಿನ ಹಲವು ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ:

ಅಂಬೇಡ್ಕರ್ ರಸ್ತೆಯಿಂದ ಕೆ.ಆರ್. ವೃತ್ತದ ಕಡೆಗೆ ತೆರಳುವ ಮಾರ್ಗ.

ಕೆ.ಆರ್. ವೃತ್ತದಿಂದ ಶೇಷಾದ್ರಿ ರಸ್ತೆಯ ಮೂಲಕ ಶಿವಾಜಿನಗರ ಮತ್ತು ವಸಂತನಗರದ ಕಡೆಗೆ ಅಂಬೇಡ್ಕರ್ ರಸ್ತೆಯ ಮಾರ್ಗವಾಗಿ ತೆರಳುವ ವಾಹನ ಸಂಚಾರ ಬಂದ್.

ಕೆ.ಆರ್. ವೃತ್ತದ ಕಡೆಗೆ ತೆರಳುವ ವಾಹನಗಳು: ಬಾಳೇಕುಂದ್ರಿ ಜಂಕ್ಷನ್‌ನಿಂದ ಕನ್ನಿಂಗ್‌ಹ್ಯಾಮ್ ರಸ್ತೆ ಮೂಲಕ ತೆರಳಿ, ಚಂದ್ರಿಕಾ ಹೋಟೆಲ್ ಬಳಿ ಎಡಕ್ಕೆ ತಿರುಗಿ ಎಲ್‌ಆರ್‌ಡಿಇ (LRDE) – ಬಸವೇಶ್ವರ ಜಂಕ್ಷನ್ – ಪ್ಯಾಲೇಸ್ ರಸ್ತೆ ಮಾರ್ಗವಾಗಿ ಕೆ.ಆರ್. ವೃತ್ತವನ್ನು ತಲುಪಬಹುದು.

ಸಾರ್ವಜನಿಕರಿಗೆ ಮನವಿ: ಕಾರ್ಯಕ್ರಮದ ವೇಳೆಯಲ್ಲಿ ವಿಧಾನಸೌಧ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರು ಹಾಗೂ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಬಳಸಿ ಸಂಚಾರ ಪೊಲೀಸರೊಂದಿಗೆ ಸಹಕರಿಸಬೇಕಾಗಿ ಕೋರಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version