ಬೆಂಕಿ ಹಚ್ಚಿಕೊಂಡು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಕುಂದಾಪುರ: ಎಸೆಸೆಲ್ಸಿಯಲ್ಲಿ ಓದುತ್ತಿರುವ ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ಸೀಮೆ ಎಣ್ಣೆ ಸುರಿದು ಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕುಂಭಾಸಿ ಸಮೀಪದ ಕೊರವಡಿಯಲ್ಲಿ ಆ.1 ಸೋಮವಾರ ನಡೆದಿದೆ.
ಕೋಟ ಪಡುಕರೆ ಫ್ರೌಢಶಾಲೆಯ 10ತರಗತಿಯ ವಿದ್ಯಾರ್ಥಿ ಅನನ್ಯ (15) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಒಂದು ದಿಕ್ಕಿನ ಕೋಣೆಗೆ ತೆರಳಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ.
ಬೆಂಕಿ ಕಂಡು ಪಕ್ಕದ ಮನೆಯವರು ಮನೆ ಬಳಿ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಬಳಿಕ ಬಾಲಕಿಯನ್ನು ಮಣಿಪಾಲದ ಖಾಸಗಿ ಆಸ್ಪತ್ರೆ ಸಾಗಿಸಿದ್ದು, ಆದರೆ ತೀವ್ರ ಸುಟ್ಟ ಗಂಭೀರ ಗಾಯಗಳಿಂದಾಗಿ ಬಾಲಕಿ ಮೃತಪಟ್ಟಿದ್ದಾಳೆ.
ಬಾಲಕಿ ತಂದೆ,ತಾಯಿ ಬೆಂಗಳೂರಿನಲ್ಲಿ ನೆಲೆಸಿದ್ದು ಆಕೆ ಅಜ್ಜಿ ಮತ್ತು ಚಿಕ್ಕಮ್ಮನ ಜೊತೆ ವಾಸ್ತವ್ಯ ಇದ್ದಳು ಎನ್ನಲಾಗಿದೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

























