ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ 3 ಬಸ್ ಗಳು
27/12/2022
ಬೆಂಗಳೂರು: ನಿಂತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡ ಪರಿಣಾಮ ಮೂರು ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಮೈಸೂರು ರಸ್ತೆಯ ಯು ಆರ್ ವಿ ಎಂಜಿನಿಯರಿಂಗ್ ಕಾಲೇಜಿನ ಬಳಿಯಲ್ಲಿ ನಡೆದಿದೆ.
ಬಸ್ ಗಳು ಎಸ್ ಆರ್ ಎಸ್ ಟ್ರಾವೆಲ್ಸ್ ಗೆ ಸೇರಿದ್ದಾಗಿದ್ದು, ಘಟನೆ ಮಾಹಿತಿ ತಿಳಿದು ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬಸ್ ಗೆ ಬೆಂಕಿ ಹತ್ತಿಕೊಳ್ಳಲು ಕಾರಣ ಏನು ಅನ್ನೋದು ತಿಳಿದು ಬಂದಿಲ್ಲ. ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka