ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ - Mahanayaka

ಶಿಕ್ಷಕರಿಂದ ಲಂಚ ಪಡೆಯುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ

k n jayanna
19/10/2022

ಕಡೂರು: ಶಾಲೆಯೊಂದಕ್ಕೆ ನಿಯೋಜನೆ ಮಾಡಲು ಶಿಕ್ಷಕರೊಬ್ಬರಿಂದ ಲಂಚ ಪಡೆಯುವಾಗ ಕಡೂರು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಮಂಗಳವಾರ ಮಧ್ಯಾಹ್ನ ಸಹ ಶಿಕ್ಷಕ ಎನ್.ಎಸ್. ರಾಜಪ್ಪ ಅವರಿಂದ 15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಕ್ಷೇತ್ರ ಶಿಕ್ಷಣಾಕಾರಿ ಕೆ.ಎನ್.ಜಯಣ್ಣ ಲೋಕಾಯುಕ್ತ ಡಿವೈಎಸ್ಪಿ ತಿರುಮಲೇಶ್ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕರುಗಳಾದ ಸಚ್ಚಿನ್ ಮತ್ತು ಬಿ. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.

ತಾಲ್ಲೂಕಿನ ಜಿ.ತಿಮ್ಮಾಪುರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿಯೋಜನೆ ಮೇರೆಗೆ ಕರ್ತವ್ಯದಲ್ಲಿದ್ದ ರಾಜಪ್ಪ ಅವರನ್ನು ಗರ್ಜೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಿಯೋಜನೆ ಮಾಡಲು ಕ್ಷೇತ್ರ ಶಿಕ್ಷಣಾಕಾರಿಗಳು ಹಣದ ಬೇಡಿಕೆ ಇಟ್ಟಿದ್ದು, ಮಂಗಳವಾರ ಈ ಸಂಬಂಧ ಶಿಕ್ಷಕ ರಾಜಪ್ಪ ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಜಿ. ತಿಮ್ಮಾಪುರ ಗೇಟ್‌ ನಲ್ಲಿ 15 ಸಾವಿರ ಲಂಚ ನೀಡುವಾಗ ಸಿಕ್ಕಿಬಿದ್ದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ