1:20 PM Thursday 16 - October 2025

ಬೇರೆ ಕೊವಿಡ್ ಲಸಿಕೆಯ 2ನೇ ಡೋಸ್ ತೆಗೆದುಕೊಂಡರೆ ತೊಂದರೆ ಇದೆಯೇ? | ಸರ್ಕಾರ ಏನು ಹೇಳಿದೆ?

covid 19
27/05/2021

ನವದೆಹಲಿ:  ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪರಿಣಾಮ ಆಗುವ ಸಾಧ್ಯತೆ ಇಲ್ಲ. ಆದರೆ, ಈ ದೃಢವಾದ ಅಭಿಪ್ರಾಯಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆ ಅಗತ್ಯವಾಗಿದೆ ಕೇಂದ್ರ ಸರ್ಕಾರ ತಿಳಿಸಿದೆ.

ಆದಾಗ್ಯೂ, ಅಸ್ತಿತ್ವದಲ್ಲಿರುವ ಪ್ರೋಟೋಕಾಲ್ ಪ್ರಕಾರ ಒಬ್ಬ ವ್ಯಕ್ತಿಗೆ ನೀಡಲಾಗುವ ಎರಡೂ ಡೋಸ್ ಗಳು ಒಂದೇ ಲಸಿಕೆಯಾಗಿರಬೇಕು ಎಂದು ಸ್ಪಷ್ಟಪಡಿಸಿದೆ. ಉತ್ತರ ಪ್ರದೇಶದ ಸಿದ್ದಾರ್ಥ ನಗರ ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತರು ಕೋವಿಶೀಲ್ಡ್ ಮೊದಲ ಡೋಸ್ ಪಡೆದಿದ್ದ 20 ಗ್ರಾಮಸ್ಥರಿಗೆ ಕೋವಾಕ್ಸಿನ್ ಎರಡನೇ ಡೋಸ್ ನೀಡಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ, ಕೇಂದ್ರ ಸರ್ಕಾರ ಈ ರೀತಿಯ ಸ್ಪಷ್ಟನೆ ನೀಡಿದೆ.

ಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪ್ರತಿಕೂಲ ಪರಿಣಾಮ ಸಾಧ್ಯತೆ ಇಲ್ಲ. ಎರಡು ವಿಭಿನ್ನ ಲಸಿಕೆಗಳ ಡೋಸ್ ತೆಗೆದುಕೊಳ್ಳುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗಬಹುದು. ಆದರೆ, ದೃಢ ನಿರ್ಧಾರಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆಯ ಅಗತ್ಯವಿದೆ ಎಂದರು ನೀತಿ ಆಯೋಗದ ಸದಸ್ಯ (ಆರೋಗ್ಯ) ವಿಕೆ ಪೌಲ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

Exit mobile version