ಚಿಕ್ಕಮಗಳೂರು: ಅಪಾಯದ ಮಟ್ಟ ಮೀರಿ ಹರಿಯುತ್ತಿರೋ ಭದ್ರಾ ನದಿ

18/07/2024
ಚಿಕ್ಕಮಗಳೂರು: ಕಾಫಿನಾಡ ಪಶ್ವಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರಾ ನದಿಯ ಒಳ ಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ.
ಕಳಸ ಸಮೀಪ ಅಪಾಯದ ಮಟ್ಟ ಮೀರಿ ಭದ್ರಾ ನದಿ ಹರಿಯುತ್ತಿದೆ. ಕಳಸದ ಹೆಬ್ಬಾಳೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಹೆಬ್ಬಾಳ ಸೇತುವೆ ಮುಳುಗಡೆಯಿಂದ ಕಳಸದ-ಹೊರನಾಡು ಸಂಪರ್ಕ ಖಡಿತವಾಗಿದೆ.
ಜಾಂಬಳೆ ಸಮೀಪ ಭದ್ರಾ ನದಿಯಿಂದ ಸೇತುವೆ ಮೇಲೆಯೇ ನೀರು ಹರಿಯುತ್ತಿದ್ದು, ಇದರಿಂದಾಗಿ ಸಂಚಾರ ಸ್ಥಗಿತಗೊಳಿಸಲಾಗಿದೆ.
ಎನ್.ಆರ್.ಪುರ ತಾಲೂಕಿನ ಮಹಲ್ಗೋಡು ಸಮೀಪ ರಸ್ತೆಯಲ್ಲಿ ಹಳ್ಳ ಹರಿಯುತ್ತಿದೆ. ಬಾಳೆಹೊನ್ನೂರು–ಕಳಸ ರಸ್ತೆ ಸಂಚಾರ ತಾತ್ಕಾಲಿಕ ಬಂದ್ ಆಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97