ಕರ್ನಾಟಕ-ಭಾರತ್‌ ಗೌರವ್‌ ಕಾಶಿ ರೈಲು ಯಾತ್ರೆಗೆ  ಉತ್ತಮ ಸ್ಪಂದನೆ: ಟಿಕೆಟ್ ಬುಕ್ಕಿಂಗ್ ಆರಂಭ - Mahanayaka
8:30 AM Thursday 4 - December 2025

ಕರ್ನಾಟಕ–ಭಾರತ್‌ ಗೌರವ್‌ ಕಾಶಿ ರೈಲು ಯಾತ್ರೆಗೆ  ಉತ್ತಮ ಸ್ಪಂದನೆ: ಟಿಕೆಟ್ ಬುಕ್ಕಿಂಗ್ ಆರಂಭ

bharat gaurav kashi darshan
18/02/2023

ಬೆಂಗಳೂರು: ರಾಜ್ಯ ಮುಜರಾಯಿ ಇಲಾಖೆಯ ಮಹತ್ವಕಾಂಕ್ಷಿ ಯೋಜನೆಯಾದ ಕರ್ನಾಟಕ – ಭಾರತ್‌ ಗೌರವ್‌ ಕಾಶಿ ರೈಲು ಯಾತ್ರೆಯ ಮೂರನೇ ಟ್ರಿಪ್‌ ಗೆ ರಾಜ್ಯದ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬುಕ್ಕಿಂಗ್‌ ಈಗಾಗಲೇ ಪ್ರಾರಂಭವಾಗಿದ್ದು  300 ಕ್ಕೂ ಟಿಕೆಟ್‌ಗಳು ಭರ್ತಿಯಾಗಿವೆ ಎಂದು ಐಆರ್‌ ಸಿಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ನವೆಂಬರ್‌ 11, 2022 ರಂದು ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಅಮೃತ ಹಸ್ತದಿಂದ ಉದ್ಘಾಟನೆಯಾದ ಈ ಯೋಜನೆಯ ಎರಡೂ ಟ್ರಿಪ್‌ ಗಳಿಗೆ ಬಹಳಷ್ಟು ಪ್ರಶಂಸೆ ವ್ಯಕ್ತವಾಗಿದೆ. ಚಳಿಗಾಲದ ಹಿನ್ನಲೆಯಲ್ಲಿ ಮುಂದೂಡಲಾಗಿದ್ದ ರೈಲು ಪ್ರವಾಸವನ್ನ ಫೆಬ್ರವರಿ 21, 2023 ರಿಂದ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ವಾರಣಾಸಿ, ಅಯೋಧ್ಯೆ ಹಾಗೂ ಪ್ರಯಾಗ್‌ ರಾಜ್‌ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುಲು ಇದು ಉತ್ತಮ ಸಮಯವಾಗಿದೆ.   ಕರ್ನಾಟಕ ಸರ್ಕಾರದ ವತಿಯಿಂದ ಪ್ರತಿ ಯಾತ್ರಾರ್ಥಿಗೆ 5 ಸಾವಿರ ರೂಪಾಯಿಗಳ ಸಹಾಯಧನ ನೀಡಲಾಗುತ್ತಿದ್ದು, ರಾಜ್ಯದ ಭಕ್ತಾದಿಗಳೂ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ದಿವ್ಯ ಕಾಶಿ – ಭವ್ಯ ಕಾಶಿಯ ವೈಭವವನ್ನು ಕಣ್ತುಂಬಿಕೊಳ್ಳಬೇಕೆಂದು ಮುಜರಾಯಿ ಹಜ್‌ ಮತ್ತು ವಕ್ಫ್‌ ಸಚಿವರಾದ  ಶಶಿಕಲಾ  ಜೊಲ್ಲೆ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ