216 ಗಂಟೆಗಳ ಕಾಲ ಭರತ ನಾಟ್ಯ: ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದ ವಿಧುಷಿ ದೀಕ್ಷಾ

31/08/2025
ಉಡುಪಿ: ಸತತ 216 ಗಂಟೆಗಳ ಕಾಲ ನಿರಂತರವಾಗಿ ಭರತನಾಟ್ಯ ಪ್ರದರ್ಶನ ನೀಡುವ ಮೂಲಕ ಉಡುಪಿಯ ವಿಧುಷಿ ದೀಕ್ಷಾ ಹೊಸ ದಾಖಲೆಯನ್ನು ಬರೆದಿದ್ದಾರೆ.
ವಿಧುಷಿ ದೀಕ್ಷಾ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪದವಿ ಕಾಲೇಜಿನಲ್ಲಿ ಆ. 21 ರಂದು ಮಧ್ಯಾಹ್ನ 3.30 ಗಂಟೆಗೆ ಭರತನಾಟ್ಯದ ಪ್ರದರ್ಶನವನ್ನು ಆರಂಭಿಸಿ, ಆ. 30 ರ ಮಧ್ಯಾಹ್ನ 3.30 ಕ್ಕೆ ಪೂರ್ಣಗೊಳಿಸಿ, ಈ ಮೂಲಕ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ವಿಧುಷಿ ದೀಕ್ಷಾ ಅವರ ಭರತನಾಟ್ಯಕ್ಕೆ ಸಂಬಂಧಿಸಿದಂತಹ ಹತ್ತು ಹಲವು ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD