ರೈತರ ಹಕ್ಕೊತ್ತಾಯ ಜಾಥಾ ಸರ್ಕಾರದ ವಿರುದ್ಧದ ಪ್ರತಿಭಟನೆ ಎಂದು ಮಿಥುನ್ ರೈ, ಜೈನ್ ಬಿಂಬಿಸುತ್ತಿದ್ದಾರೆ: ಶಾಂತಿ ಪ್ರಸಾದ್ ಹೆಗ್ಡೆ ಆರೋಪ - Mahanayaka
8:32 AM Monday 15 - September 2025

ರೈತರ ಹಕ್ಕೊತ್ತಾಯ ಜಾಥಾ ಸರ್ಕಾರದ ವಿರುದ್ಧದ ಪ್ರತಿಭಟನೆ ಎಂದು ಮಿಥುನ್ ರೈ, ಜೈನ್ ಬಿಂಬಿಸುತ್ತಿದ್ದಾರೆ: ಶಾಂತಿ ಪ್ರಸಾದ್ ಹೆಗ್ಡೆ ಆರೋಪ

bharatiya kisan sangha
17/11/2022

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯಲ್ಲಿ ಇತ್ತೀಚೆಗೆ ರೈತರ ಕುಮ್ಕಿ ಭೂಮಿಗೆ ಹಕ್ಕುಪತ್ರ ನೀಡುವಂತೆ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಕ್ಕೊತ್ತಾಯ ಮಾತ್ರವೇ ನಡೆದಿದೆ. ಅದು ಸರಕಾರದ ವಿರುದ್ಧದ ಪ್ರತಿಭಟನೆಯಲ್ಲ ಎಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾ ಘಟಕ ಹೇಳಿದೆ.


Provided by

ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಶಾಂತಿ ಪ್ರಸಾದ್ ಹೆಗ್ಡೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಮತ್ತು ಮಾಜಿ ಶಾಸಕರಾದ ಅಭಯಚಂದ್ರ ಜೈನ್‌ ರವರು ರೈತರ ಹಕ್ಕೊತ್ತಾಯ ಜಾಥಾವನ್ನು ಸರಕಾರದ ವಿರುದ್ಧದ ಪ್ರತಿಭಟನೆ ಎಂದು ಬಿಂಬಿಸಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ್ದಾರೆ. ಅದನ್ನು ಖಂಡಿಸುವುದಾಗಿ ಹೇಳಿದರು.

ಅಭಯಚಂದ್ರ ಜೈನ್ 20 ವರ್ಷಗಳ ಕಾಲ ಶಾಸಕ, ಸಚಿವರಾಗಿದ್ದ ಸಂದರ್ಭದಲ್ಲಿ ರೈತರಿಗೆ ಕುಮ್ಕಿ ಹಕ್ಕನ್ನು ನೀಡಬೇಕೆಂಬ ಬೇಡಿಕೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಯಾವುದೇ ಹೋರಾಟ ಮಾಡಿಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಡೀಮ್ಡ್ ಪಟ್ಟಿಯನ್ನು ಸಹ ಬಿಡುಗಡೆ ಮಾಡಿಸಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ