ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: 500 ವಿದ್ಯಾರ್ಥಿಗಳಿಗೆ ಸನ್ಮಾನ - Mahanayaka
4:13 AM Thursday 13 - February 2025

ಭಾರತೀಯ ವಿದ್ಯಾರ್ಥಿ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ: 500 ವಿದ್ಯಾರ್ಥಿಗಳಿಗೆ ಸನ್ಮಾನ

bvs
28/08/2022

ಚನ್ನಪಟ್ಟಣ: ಭಾರತೀಯ ವಿದ್ಯಾರ್ಥಿ ಸಂಘ BVS- ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲೂಕು ಘಟಕದ ವತಿಯಿಂದ ಭಾನುವಾರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

SSLC -PUC ಪರೀಕ್ಷೆಗಳಲ್ಲಿ ಉತ್ತಮ ಅಂಕಪಡೆದ ಸುಮಾರು 500 ಜನ ವಿದ್ಯಾರ್ಥಿಗಳಿಗೆ  ಕಾರ್ಯಕ್ರಮದಲ್ಲಿ ಸನ್ಮಾನಮಾಡಲಾಯಿತು.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ಪ್ರತಿಭಾ ಪುರಸ್ಕಾರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಮಾತುಗಳನ್ನಾಡಿದರು. ನಗರಸಭಾ ಸದಸ್ಯರಾದ ಶೇಷಾದ್ರಿಯವರು ಅಧ್ಯಕ್ಷತೆ ವಹಿಸಿದ್ದರು.

ಅಕ್ಕ ಐಎಎಸ್ ಅಕಾಡೆಮಿ(Akka IAS Academy )ಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಮುಂದಿನ ಶೈಕ್ಷಣಿಕ ಗುರಿಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು.

ವಿದ್ಯಾರ್ಥಿ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಕಿಕ್ಕಿರಿದು ಸೇರಿದ್ದರು. ಪ್ರಾರಂಭದಲ್ಲಿ ರಾಷ್ಟ್ರಗೀತೆ ಹಾಡಿ ನಂತರ ಎಲ್ಲರಿಗೂ ಸಂವಿಧಾನದ ಪೀಠಿಕೆಯನ್ನು ಓದಿಸಿ ಪ್ರತಿಜ್ಞೆ ಮಾಡಿಸಲಾಯಿತು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ