6:23 AM Wednesday 21 - January 2026

ಭಾರೀ ಮಳೆಗೆ ಭೂಕುಸಿತ: 30 ಮಂದಿ ದಾರುಣ ಸಾವು, ಸಾವಿನ ಸಂಖ್ಯೆ ಏರಿಕೆ ಸಾಧ್ಯತೆ!

maharashtra
23/07/2021

ಮುಂಬೈ: ಮಹಾರಾಷ್ಟ್ರದಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಇಲ್ಲಿನ ರಾಯಘಡ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಪರಿಣಾಮ 30 ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ.

 

ರಾಯಘಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಮುಂಬೈನಿಂದ 160 ಕಿ.ಮೀ ದೂರದಲ್ಲಿರುವ ಈ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎನ್‍ ಡಿಆರ್‍ ಎಫ್ ಮತ್ತು ರಕ್ಷಣಾ ಪಡೆಗಳು ಧಾವಿಸಿವೆ.

 

ಸದ್ಯ ಪ್ರಾಥಮಿಕ ಮಾಹಿತಿಗಳಷ್ಟೇ ಹೊರ ಬಂದಿದ್ದು, ಈಗಾಗಲೇ 30 ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನೂ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸ್ಥಳೀಯ ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

 

ಇನ್ನಷ್ಟು ಸುದ್ದಿಗಳು…

ಜೀನ್ಸ್ ಪ್ಯಾಂಟ್ ಧರಿಸಿದ್ದಕ್ಕೆ 16 ವರ್ಷದ ಬಾಲಕಿಯನ್ನು ಕೊಂದರು!

ಶಿಲ್ಪಾ ಶೆಟ್ಟಿ ಗಂಡ ಮಾಡುತ್ತಿದ್ದದ್ದು ನೀಲಿ ಚಿತ್ರ ಅಲ್ಲ, ಕಾಮೋದ್ರೇಕಕಾರಿ ವಿಡಿಯೋ | ಮಾಡೆಲ್ ಹೇಳಿದ್ದೇನು?

ಚಿರತೆಯ ಜೊತೆಗೆ ಹೋರಾಡಿ ತನ್ನ ಮಗಳನ್ನು ರಕ್ಷಿಸಿದ ತಾಯಿ!

25-30 ಮಕ್ಕಳ ಮೇಲೆ ಬಾಣಸಿಗನಿಂದ ಲೈಂಗಿಕ ದೌರ್ಜನ್ಯ | ಕಿರುಕುಳದ ಬಳಿಕ ಈತ ಮಾಡುತ್ತಿದ್ದದ್ದೇನು ಗೊತ್ತಾ?

ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ಚಿತ್ರೀಕರಣ: ಯುವತಿ ಕಿರುಚಿದಾಗ ಆರೋಪಿ ಪರಾರಿ

ಇತ್ತೀಚಿನ ಸುದ್ದಿ

Exit mobile version