ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಮನೆಯವರು ಸ್ವಲ್ಪದರಲ್ಲೇ ಅಪಾಯದಿಂದ ಪಾರು! - Mahanayaka

ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಮನೆಯವರು ಸ್ವಲ್ಪದರಲ್ಲೇ ಅಪಾಯದಿಂದ ಪಾರು!

yedapadav mutturu
07/07/2022

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮಂಗಳೂರು ತಾಲೂಕಿನ ಎಡಪದವು ಸಮೀಪದ ಮುತ್ತೂರು ಅಂಬೇಡ್ಕರ್‌ ನಗರದ ಎಸ್ಸಿ ಕಾಲನಿಯಲ್ಲಿರುವ ರುಕ್ಮಯ್ಯ ಎಂಬವರ ಮನೆ ಭಾರೀ ಮಳೆಯ ಪರಿಣಾ ಕುಸಿದು ಬಿದ್ದಿದೆ.

ಘಟನೆ ನಡೆದ ವೇಳೆ ಕುಟುಂಬಸ್ಥರು ಮನೆಯಲ್ಲೇ ಇದ್ದರು. ಆದರೆ, ಕುಸಿತಕ್ಕೊಳಗಾದ ಕೋಣೆಯಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅದೃಷ್ಟವಶಾತ್  ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.

ಪರಿಶಿಷ್ಟ ಜಾತಿಯ ರುಕ್ಮಯ್ಯ ಎಂಬವರು ತೀರಾ ಬಡವರಾಗಿದ್ದು, ಪತ್ನಿ ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಘಟನೆ ವೇಳೆ ಮನೆಯಲ್ಲಿ ರುಕ್ಮಯ್ಯ ಎಂಬವರ ಪತ್ನಿ ಅಡುಗೆ ಕೋಣೆಯಲ್ಲಿದ್ದು, ಮಕ್ಕಳು ಶಾಲೆಗೆ ರಜೆಯಿದ್ದ ಕಾರಣ ಪಕ್ಕದ ಮನೆಗೆ ತೆರಳಿದ್ದರು. ಈ ವೇಳೆ ಮನೆಯ ಒಂದು ಭಾಗ ಕುಸಿದು ಬಿದ್ದಿದೆ.

ಘಟನಾ ಸ್ಥಳಕ್ಕೆ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮುತ್ತೂರು ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಸತೀಶ್‌ ಬಳ್ಳಾಜೆ  ಭೇಟಿ ನೀಡಿ ತಾತ್ಕಾಲಿಕವಾಗಿ ಟರ್ಪಾಲ್‌  ವ್ಯವಸ್ಥೆ ಮಾಡಿ ಕೊಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಹುಜನ ಸಮಾಜ ಪಾರ್ಟಿ(ಬಿಎಸ್ಪಿ )ದ.ಕ. ಜಿಲ್ಲಾಧ್ಯಕ್ಷ ದಾಸಪ್ಪ ಎಡಪದವು, ಬಿಎಸ್ಪಿ ದ.ಕ. ಜಿಲ್ಲಾ ಉಸ್ತುವಾರಿ ಗೋಪಾಲ್‌ ಮುತ್ತೂರು, ಗುರುಪುರ ಬ್ಲಾಕ್‌ ಎಸ್ಸಿ, ಎಸ್ಟಿ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹರಿಯಪ್ಪ ಮುತ್ತೂರು, ಮಂಗಳೂರು ಉತ್ತರದ ಬಿಎಸ್ಪಿ ಉಸ್ತುವಾರಿ ಲೋಕೇಶ್‌ ಮುತ್ತೂರು ಭೇಟಿ ನೀಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ