12:17 PM Saturday 23 - August 2025

ಇಂದು ಭವಾನಿ ರೇವಣ್ಣ ಭವಿಷ್ಯ ನಿರ್ಧಾರ: ಭವಾನಿ ಬಂಧನವಾಗುತ್ತಾ?

bhavani revanna
10/07/2024

ಬೆಂಗಳೂರು:  ಕೆ.ಆರ್ ನಗರದ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ‌ ಜಾಮೀನು ಪ್ರಶ್ನಿಸಿ SIT ಅಧಿಕಾರಿಗಳು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.

ಇಂದು ಸುಪ್ರೀಂಕೋರ್ಟ್‌‌ನಲ್ಲಿ  ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವ  ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ನೀಡುವ ತೀರ್ಪು ಭವಾನಿಯ ಭವಿಷ್ಯ ನಿರ್ಧಾರ ಮಾಡಲಿದೆ.

ಕೆ.ಆರ್ ನಗರ ಸಂತ್ರಸ್ತೆ ಕಿಡ್ನಾಪ್ ಪ್ರಕರಣದಲ್ಲಿ ಭವಾನಿ ರೇವಣ್ಣ‌ ಹೆಸರು ಕೇಳಿ ಬಂದಿದ್ದು, ಎಸ್ ಐಟಿ ಅಧಿಕಾರಿಗಳು ಬಂಧನಕ್ಕೆ ಸಿದ್ದತೆ ನಡೆಸಿದ್ದರು. ಈ ವೇಳೆ ಭವಾನಿ ರೇವಣ್ಣ‌ ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಪಡೆದು ಬಂಧನದ ಭೀತಿಯಿಂದ ಪಾರಾಗಿದ್ದರು.

ಇದೀಗ ಎಸ್ ಐಟಿ ಅಧಿಕಾರಿಗಳು ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದು, ಇಂದು ಸುಪ್ರೀಂ ಕೋರ್ಟ್‌ನಲ್ಲಿ ಎಸ್ ಐಟಿ ಅರ್ಜಿ ವಿಚಾರಣೆ ನಡೆಸಲಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version