ಬೆಳ್ಳಂಬೆಳಗ್ಗೆ ಭೀಕರ ಅಪಘಾತ | 14 ಜನರ ದಾರುಣ ಸಾವು | 4 ಮಂದಿಯ ಸ್ಥಿತಿ ಗಂಭೀರ - Mahanayaka
9:59 AM Thursday 7 - November 2024

ಬೆಳ್ಳಂಬೆಳಗ್ಗೆ ಭೀಕರ ಅಪಘಾತ | 14 ಜನರ ದಾರುಣ ಸಾವು | 4 ಮಂದಿಯ ಸ್ಥಿತಿ ಗಂಭೀರ

14/02/2021

ಕರ್ನೂಲ್: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು,  14 ಜನರು ದಾರುಣವಾಗಿ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಇಲ್ಲಿನ ಚಿತ್ತೂರು ಜಿಲ್ಲೆಯ ಮದನಪಲ್ಲೆಯಿಂದ ಅಜ್ಮೀರ್ ದರ್ಗಾಕ್ಕೆ ಮಿನಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಲಾರಿಯೊಂದು ಬಸ್ ಗೆ ಡಿಕ್ಕಿ ಹೊಡೆದಿದೆ.  ಬಸ್ ನಲ್ಲಿ 18 ಜನರಿದ್ದರು. ಇವರ ಪೈಕಿ 14 ಮಂದಿ ಮೃತಪಟ್ಟಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಂಭೀರವಾಗಿ ಗಾಯಗೊಂಡವರ ಸ್ಥಿತಿ ಚಿಂತಾಜನಕವಾಗಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿಗೆ ಎಂದು ತಿಳಿದು ಬಂದಿದೆ.  ಘಟನೆ ನಡೆದ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವೆಲ್ದುರ್ಥಿ ಬಳಿಯ ಮಾದಾಪುರದಲ್ಲಿ ಮೌನ ಆವರಿಸಿದೆ.

ಇತ್ತೀಚಿನ ಸುದ್ದಿ