2:51 PM Saturday 17 - January 2026

ಈರುಳ್ಳಿ ಸಾಗಾಟದ ಲಾರಿಗೆ ಗ್ಯಾಸ್ ಟ್ಯಾಂಕರ್ ಡಿಕ್ಕಿ ನಾಲ್ವರು ಸ್ಥಳದಲ್ಲೇ ಸಾವು

lorry
04/12/2021

ಚಿತ್ರದುರ್ಗ:  ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ದಾರುಣ ಘಟನೆ ಶನಿವಾರ ನಸುಕಿನ ವೇಳೆ ಚಿತ್ರದುರ್ಗ ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ರಾಯಚೂರು ಮೂಲದ ಹುಲುಗಪ್ಪ, ಕುಷ್ಟಗಿಯ ಮಂಜುನಾಥ, ವಿಜಯಪುರದ ಸಂಜಯ್, ಗದಗ ಜಿಲ್ಲೆಯ ರೋಣ ತಾಲೂಕಿನ ಲಾರಿ ಚಾಲಕ ಶರಣಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆಯ ರೋಣ ತಾಲೂಕಿನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ದೊಡ್ಡಸಿದ್ದವ್ವನ ಹಳ್ಳಿ ಸಮೀಪ ಪಂಚರ್ ಆಗಿದ್ದು, ಹೀಗಾಗಿ ರಸ್ತೆ ಬದಿಯಲ್ಲಿ ಲಾರಿಯನ್ನು ನಿಲ್ಲಿಸಿ ಪಂಚರ್ ಹಾಕುತ್ತಿದ್ದ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ.

ಕ್ಷಣ ಮಾತ್ರದಲ್ಲೇ ನಡೆದ ಈ ಅಪಘಾತದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಲಾರಿ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ರಸ್ತೆಯಿಡೀ ಈರುಳ್ಳಿ ಚೆಲ್ಲಿದೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

‘BTV’ ಅಮೂಲ್ಯ ಸುದ್ದಿ ವಿಚಾರ: “ನಿಮ್ಮ ಪತ್ರಿಕೆ ಮದ್ವೆ ಸುದ್ದಿ ಮಾಡಿಲ್ವಾ?” | “ಒಂದು ಇಮೋಜಿಗೆ ಇಷ್ಟು ಉರ್ಕೊಂಡ್ರೆ ಹೇಗೆ?” | ಪರ ವಿರೋಧ ಚರ್ಚೆ!

ಪಬ್ ನಲ್ಲಿ ಕಿರಿಕ್: ಬಿಗ್ ಬಾಸ್ ಖ್ಯಾತಿಯ ಕಿರಿಕ್ ಕೀರ್ತಿಗೆ ಬಿಯರ್ ಬಾಟಲಿಯಿಂದ ಹಲ್ಲೆ

ಒಮಿಕ್ರಾನ್ ಡೆಲ್ಟಾಕ್ಕಿಂತ ಅಪಾಯಕಾರಿ ಅಲ್ಲ: ಈ ವೈರಸ್ ನ್ನು ಕಂಡು ಹಿಡಿದ ಡಾಕ್ಟರ್ ಆ್ಯಂಜಲಿಕ್ ಹೇಳಿದ್ದೇನು?

ಶಾಕಿಂಗ್ ನ್ಯೂಸ್: ಕರ್ನಾಟಕದಲ್ಲಿ 2 ಒಮಿಕ್ರಾನ್ ಪ್ರಕರಣಗಳು ಪತ್ತೆ

ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಅರೆಸ್ಟ್

ಇತ್ತೀಚಿನ ಸುದ್ದಿ

Exit mobile version