ಭೀಕರ ಅಪಘಾತ: ಕಾರಿನಲ್ಲಿ ಸಜೀವ ದಹನವಾಗಿ ಐವರು ದಾರುಣ ಸಾವು - Mahanayaka
8:31 AM Tuesday 16 - September 2025

ಭೀಕರ ಅಪಘಾತ: ಕಾರಿನಲ್ಲಿ ಸಜೀವ ದಹನವಾಗಿ ಐವರು ದಾರುಣ ಸಾವು

22/12/2020

ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರೊಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಇದರಿಂದಾಗಿ ಕಾರಿನಲ್ಲಿದ್ದ ಐವರು ಸಜೀವ ದಹನವಾದ ದಾರುಣ ಘಟನೆ ನಡೆದಿದೆ.


Provided by

 ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ನಾಗಾಲ್ಯಾಂಡ್ ನೋಂದಣಿ ಸಂಖ್ಯೆಯುಳ್ಳ ಕಂಟೈನರ್ ಗೆ ಡಿಕ್ಕಿ ಹೊಡೆದಿತ್ತು.

ಡಿಕ್ಕಿ ಹೊಡೆದ ವೇಗಕ್ಕೆ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ.  ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದಿದ್ದು, ಆದರೆ ಅದಾಗಲೇ ಕಾರಿನಲ್ಲಿದ್ದವರು ಸಜೀವ ದಹನವಾಗಿದ್ದಾರೆ.  ಬಳಿಕ ಬೆಂಕಿ ನಂದಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

ಇತ್ತೀಚಿನ ಸುದ್ದಿ