ಭೀಕರ ಅಪಘಾತ: ಕಾರಿನಲ್ಲಿ ಸಜೀವ ದಹನವಾಗಿ ಐವರು ದಾರುಣ ಸಾವು
ಆಗ್ರಾ: ಉತ್ತರ ಪ್ರದೇಶದ ಆಗ್ರಾದಲ್ಲಿ ಕಾರೊಂದು ಕಂಟೈನರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಕಾರಿಗೆ ಬೆಂಕಿ ಹತ್ತಿಕೊಂಡಿದ್ದು, ಇದರಿಂದಾಗಿ ಕಾರಿನಲ್ಲಿದ್ದ ಐವರು ಸಜೀವ ದಹನವಾದ ದಾರುಣ ಘಟನೆ ನಡೆದಿದೆ.
ಆಗ್ರಾದ ಯಮುನಾ ಎಕ್ಸ್ ಪ್ರೆಸ್ ಹೈವೆಯಲ್ಲಿ ಉತ್ತರ ಪ್ರದೇಶದಿಂದ ದೆಹಲಿಯ ಕಡೆ ಪ್ರಯಾಣಿಸುತ್ತಿದ್ದ ಕಾರೊಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ನಾಗಾಲ್ಯಾಂಡ್ ನೋಂದಣಿ ಸಂಖ್ಯೆಯುಳ್ಳ ಕಂಟೈನರ್ ಗೆ ಡಿಕ್ಕಿ ಹೊಡೆದಿತ್ತು.
ಡಿಕ್ಕಿ ಹೊಡೆದ ವೇಗಕ್ಕೆ ಕಾರಿಗೆ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಘಟನೆ ಸ್ಥಳಕ್ಕೆ ಅಗ್ನಿಶಾಮಕ ದಳ ಬಂದಿದ್ದು, ಆದರೆ ಅದಾಗಲೇ ಕಾರಿನಲ್ಲಿದ್ದವರು ಸಜೀವ ದಹನವಾಗಿದ್ದಾರೆ. ಬಳಿಕ ಬೆಂಕಿ ನಂದಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.
Disclaimer:
www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.