ಆಟೋ—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳ ಸಹಿತ ಐವರ ದಾರುಣ ಸಾವು - Mahanayaka
12:29 AM Thursday 15 - January 2026

ಆಟೋ—ಲಾರಿ ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳ ಸಹಿತ ಐವರ ದಾರುಣ ಸಾವು

mandya accident
19/11/2021

ಮಂಡ್ಯ: ಭೀಕರ ಅಪಘಾತವೊಂದರಲ್ಲಿ ಇಬ್ಬರು ಮಕ್ಕಳ ಸಹಿತ ಐವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಲಮಾಕನಹಳ್ಳಿ ಗೇಟ್ ನಲ್ಲಿ ನಡೆದಿದೆ.

ಆಟೋ ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದಿದ್ದು, ಪರಿಣಾಮವಾಗಿ, ವೆಂಕಟೇಶ್(25), ಮುತ್ತಮ್ಮ(45), ಬಸಮ್ಮಣ್ಣಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಮಕ್ಕಳು ಮಳವಳ್ಳಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೃತಪಟ್ಟವರೆಲ್ಲರೂ ಮಳವಳ್ಳಿಯ ಧಡಧಪುರ ನಿವಾಸಿಗಳಾಗಿದ್ದು, ಇವರೆಲ್ಲರೂ ಆಟೋದಲ್ಲಿ ಪ್ರಯಾಣಿಸುತ್ತಿದ್ದವರು ಎಂದು ತಿಳಿದು ಬಂದಿದೆ. ಮದ್ದೂರು ಕಡೆಗೆ ಆಟೋ ಹೋಗುತ್ತಿದ್ದು, ಈ ವೇಳೆ ಮಳವಳ್ಳಿ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.

ಘಟನೆ ಸಂಬಂಧ ಮಳವಳ್ಳಿ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಅಪ್ರಾಪ್ತೆಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದ ಯುವಕ ಆತ್ಮಹತ್ಯೆಗೆ ಶರಣು

ಮಂಗಳೂರು: 1.92 ಕೋ.ರೂ. ಮೌಲ್ಯದ ಅಮಾನ್ಯ ನೋಟುಗಳು ಪತ್ತೆ

ಕೃಷಿ ಕಾಯ್ದೆ ವಾಪಸ್ | ಪತ್ರಕರ್ತರ ಪ್ರಶ್ನೆಗೆ ನಿರುತ್ತರವಾಗಿ ಮುಂದೆ ನಡೆದ ಸಚಿವೆ ಶೋಭಾ ಕರಂದ್ಲಾಜೆ

ಬಜ್ಪೆಯ ಪೊರ್ಕೋಡಿಯಲ್ಲಿ ದಲಿತ -ಮುಸ್ಲಿಂ ಸ್ನೇಹ ಸಮ್ಮಿಲನ

ಮಳೆ ಅನಾಹುತ: ಬಹುಮಹಡಿ ಕಟ್ಟಡದ ಗೋಡೆ ಕುಸಿದು 9 ಮಂದಿಯ ದಾರುಣ ಸಾವು

ಭಾರೀ ಮಳೆಗೆ 3 ಮಂದಿ ಸಾವು: ಪ್ರವಾಹದ ಪರಿಣಾಮ 30 ಮಂದಿ ನಾಪತ್ತೆ

6 ಮಕ್ಕಳನ್ನು ರಕ್ಷಿಸಿ ಕಣಜದ ಹುಳುಗಳಿಗೆ ಬಲಿಯಾದ ಗೃಹ ರಕ್ಷಕ ಸಿಬ್ಬಂದಿ

ಇತ್ತೀಚಿನ ಸುದ್ದಿ