ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ - Mahanayaka
4:01 AM Friday 12 - September 2025

ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದ ಲಾರಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

tumakuru news
09/09/2022

ತುಮಕೂರು:  ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ  ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ.


Provided by

30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು  ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಮಾಹಿತಿ ಪಡೆದಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ