ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಸಾವು - Mahanayaka
2:38 AM Thursday 30 - November 2023

ಭೀಕರ ರಸ್ತೆ ಅಪಘಾತ: ಮೂವರು ಸ್ಥಳದಲ್ಲೇ ಸಾವು

08/01/2021

ಚಾಮರಾಜನಗರ: ರಸ್ತೆ ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ  ತಾಲ್ಲೂಕಿನ ಸುವರ್ಣಾವತಿ ಜಲಾಶಯದ ಬಳಿಯ ಗುಡಿಬೋರೆ ಎಂಬಲ್ಲಿ ನಡೆದಿದೆ.

ತಮಿಳುನಾಡು ನೋಂದಣಿಯ ಟೆಂಪೋ ಟ್ರಾವೆಲರ್ ಅಪಘಾತಕ್ಕೀಡಾಗಿದ್ದು, ಪರಿಣಾಮವಾಗಿ ಮೂವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.  ಘಟನೆಯಲ್ಲಿ 11 ಜನರು ಗಾಯಗೊಂಡಿದ್ದು,  ಗಾಯಾಳುಗಳ ಪೈಕಿ ನಾಲ್ವರು ಮಕ್ಕಳೂ ಸೇರಿದ್ದಾರೆ.

ತಿರುಪ್ಪೂರಿನಿಂದ ಟೆಂಪೋ ಟ್ರಾವೆಲರ್ ಮೂಲಕ  14 ಮಂದಿ ಮೈಸೂರಿಗೆ ಹೊರಟಿದ್ದರು ಎಂದು ತಿಳಿದು ಬಂದಿದೆ. ಈ ಪೈಕಿ ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು  ಸುಬ್ರಮಣ್ಯ (75), ಅವರ ಪತ್ನಿ ಅಮರಾವತಿ (65) ಹಾಗೂ ಪುತ್ರಿ ಕೋಕಿಲ (40) ಎಂದು ಗುರುತಿಸಲಾಗಿದೆ. ಇನ್ನೂ ಗಾಯಾಳುಗಳ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ