ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು | ಅಪರಿಚಿತರಿಂದ ಮಹಾದೇವ ಭೈರಗೊಂಡ ಮೇಲೆ ಗುಂಡಿನ ದಾಳಿ
02/11/2020
ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಮೂವರು ಅಪರಿಚಿತ ವ್ಯಕ್ತಿಗಳು ಮಹಾದೇವ ಭೈರಗೊಂಡ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯಿಂದಾಗಿ ಭೈರಗೊಂಡ ತೀವ್ರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ವಿಯಪುರದ ಚಡಚಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮೂವರು ಅಪರಿಚಿತ ವ್ಯಕ್ತಿಗಳು ಮಹಾದೇವ ಬೈರಗೊಂಡ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಆ ಬಳಿಕ ಅವರು ಸ್ಘಳದಿಂದ ಕಾಲ್ಕಿತ್ತಿದ್ದಾರೆ. ಗಂಭೀರವಾಗಿ ಗಾಯಗೊಂಡು ಬಿದ್ದಿದ್ದ ಮಹಾದೇವ ಭೈರಗೊಂಡನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.