ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು - Mahanayaka

ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು

accident
16/02/2022

ಲಕ್ನೋ: ನಿಂತಿದ್ದ ಕಂಟೈನರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ದಾರುಣ ಘಟನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ಸಂಭವಿಸಿದೆ.

ರಾಮಸ್ನೇಹಿ ಘಾಟ್ ಕೊತ್ವಾಲಿ ಪ್ರದೇಶದ ನಾರಾಯಣಪುರ ಗ್ರಾಮದ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರೊಂದು ಹೆದ್ದಾರಿಯಲ್ಲಿ ನಿಂತಿದ್ದ ಕಂಟೈನರ್‌ಗೆ ಡಿಕ್ಕಿಯಾಗಿ ಅವಘಡ ಸಂಭವಿಸಿದೆ.

ಪೊಲೀಸರ ಪ್ರಕಾರ, ಕಾರಿನಲ್ಲಿದ್ದ ಕುಟುಂಬವು ಗುಜರಾತ್‌ನ ಅಹಮದಾಬಾದ್‌ನ ನಿವಾಸಿಗಳು ಎಂದು ಗೊತ್ತಾಗಿದ್ದು, ಕುಟುಂಬ ಎಲ್ಲಿಗೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿಲ್ಲ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗವು ಕಂಟೈನರ್ ಒಳಗೆ ತಳ್ಳಲ್ಪಟ್ಟಿದ್ದು ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಕಾರಾಗೃಹದಲ್ಲಿ ಗಾಜಿನಿಂದ ಕುತ್ತಿಗೆ ಕೊಯ್ದುಕೊಂಡ ಖೈದಿ

ಹುಲಿ ಚರ್ಮ ಮಾರಾಟಕ್ಕೆ ಯತ್ನ: ನಾಲ್ವರು ಆರೋಪಿಗಳ ಬಂಧನ

ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ

ರೈಲು ಹಳಿಯ ಮೇಲೆ ನಿಂತು ಸೆಲ್ಫಿ: ನಾಲ್ವರು ಯುವಕರ ದುರ್ಮರಣ

ಇತ್ತೀಚಿನ ಸುದ್ದಿ