ಭ್ರಷ್ಟಾಚಾರದ ದುಡ್ಡಿನಿಂದ ಆಪರೇಷನ್ ಕಮಲ: ಸಿದ್ದರಾಮಯ್ಯ ಆರೋಪ - Mahanayaka

ಭ್ರಷ್ಟಾಚಾರದ ದುಡ್ಡಿನಿಂದ ಆಪರೇಷನ್ ಕಮಲ: ಸಿದ್ದರಾಮಯ್ಯ ಆರೋಪ

siddaramaiha
24/06/2022

ಮೈಸೂರು : ಮಹಾರಾಷ್ಟ್ರದಲ್ಲಿ ಕಳೆದೆರಡು ದಿನದಿಂದ ರಾಜಕೀಯ ಸಂಚಲನವೇ ಸೃಷ್ಟಿಯಾಗಿದೆ. ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನೆ ಶಾಸಕರು ಬಂಡಾಯ ಎದ್ದಿದ್ದು ಬಿಜೆಪಿಯ ಆಪರೇಷನ್ ಕಮಲ ಮಾಡುತ್ತಿದೆ  ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬಿಜೆಪಿ ಭ್ರಷ್ಟಾಚಾರದ ಹಣದಿಂದ ಆಪರೇಷನ್ ಕಮಲಕ್ಕೆ ಮುಂದಾಗಿದ್ದು, ಇದು ಪ್ರಜಾಪ್ರಭುತ್ವಕ್ಕೆ ಮಾರಕ ಎಂದಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಆಪರೇಷನ್ ಕಮಲ ಹುಟ್ಟು ಹಾಕಿದ್ದ ಕರ್ನಾಟಕದ ಬಿಜೆಪಿ ನಾಯಕರು.ಕರ್ನಾಟಕದ ಬಿಜೆಪಿ ಚಾಳಿ ಇಡೀ ದೇಶಕ್ಕೆ ಹಬ್ಬಿದೆ. ಇದನ್ನು ತಡಯಬೇಕು. ಪಕ್ಷಾಂತರ ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ಒಂದು ಪಕ್ಷದಿಂದ ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು. ಬೇರೆ ಪಕ್ಷಕ್ಕೆ ಹೋದರೆ ಆ ಶಾಸಕರಿಗೆ 10 ವರ್ಷ ಚುನಾವಣೆಗೆ ನಿಲ್ಲದಂತೆ ಮಾಡಬೇಕು. ಇದರಿಂದ ಮಾತ್ರ ಪ್ರಜಾಪ್ರಭುತ್ವ ಉಳಿಯಲಿದೆ ಎಂದು ಹೇಳಿದ್ದಾರೆ

ಕರ್ನಾಟಕದ ಬಿಜೆಪಿಯವರು, 2008 ರಲ್ಲಿ ಬಿ.ಎಸ್.ಯಡಿಯೂರಪ್ಪ ಮೊದಲ ಆಪರೇಷನ್ ಕಮಲ ಮಾಡಿದರು.  ಆವತ್ತು ಬಿಜೆಪಿಯವರಿಗೆ ಎಲ್ಲೂ ಬಹುಮತ ಬಂದಿಲ್ಲ. ಎಲ್ಲಾ ಕಡೆ ಆಪರೇಷನ್ ಕಮಲದಿಂದ ಶಾಸಕರನ್ನು ಖರೀದಿ ಮಾಡಿ ಸರ್ಕಾರ ರಚನೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಪತಿಗೆ ಪರಸ್ತ್ರಿ ಸಹವಾಸ: ಪತಿ-ಮಹಿಳೆಯ ಬೆತ್ತಲೆ ಮೆರವಣಿಗೆ ನಡೆಸಿದ ಪತ್ನಿ

ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಒಳ ಉಡುಪಿನಲ್ಲಿ ಚಿನ್ನ ಸಾಗಾಗಿಸುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ

ಬಾಳು ಕೊಡುತ್ತೇನೆಂದು ಮಹಿಳೆಯನ್ನು ಕರೆದೊಯ್ದ ಅರ್ಚಕ, ಕಾಡಿನಲ್ಲಿ ಬಿಟ್ಟು ಹೋದ!

ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಎನ್‌ ಡಿಎ ರಾಷ್ಟ್ರಪತಿ ಅಭ್ಯರ್ಥಿ

ಇತ್ತೀಚಿನ ಸುದ್ದಿ