ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ - Mahanayaka
1:16 AM Wednesday 27 - August 2025

ಸಿಎಂ, ಡಿಸಿಎಂ ಕುರ್ಚಿ ಕಿತ್ತಾಟ, ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ: ಬಸವರಾಜ ಬೊಮ್ಮಾಯಿ

basavaraj bommai
01/07/2024


Provided by

ಹಾವೇರಿ:  ರಾಜ್ಯ ಸರ್ಕಾರದಲ್ಲಿ ಬರಿ ಖುರ್ಚಿಯ ಕಚ್ಚಾಟ ನಡೆದಿದೆ. ಇಷ್ಟು ಅನುಭವ ಇರುವ ಸಿಎಂ, ಡಿಸಿಎಂ, ಮಂತ್ರಿಗಳಿದ್ದರೂ ಖುರ್ಚಿಗಾಗಿ ಕಿತ್ತಾಟ ಮಾಡುವುದು ಕರ್ನಾಟಕದ ಹಿತದೃಷ್ಟಿಯಿಂದ ಸರಿ ಅಲ್ಲ. ಈ ಸರಕಾರವನ್ನು ಜನಸಾಮಾನ್ಯರು ಅತ್ಯಂತ ಖಂಡನೀಯವಾಗಿ ನೋಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಬಿಳುತ್ತದೆ ಎಂದು ಬಸವರಾಜ್ ಬೊಮ್ಮಾಯಿ ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರದ ಸ್ಥಿತಿ ಬಗ್ಗೆ ಯೋಚನೆ ಮಾಡಲಿ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ  ಸಲೀಂ ಅಹ್ಮದ್‌  ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ ಬಸವರಾಜ ಬೊಮ್ಮಾಯಿ,  ಸಲೀಂ ಅಹ್ಮದ್‌ ವಿಧಾನ ಪರಿಷತ್ ಸದಸ್ಯರು ವಿಧಾನಸಭೆಯಲ್ಲಿ ಏನು ಆಗುತ್ತೆ..? ಮಂತ್ರಿ ಮಂತ್ರಿಗಳ ನಡುವೆ ಏನಾಗುತ್ತದೆ.? ಸಿಎಂ, ಡಿಸಿಎಂ ನಡುವೇ ಏನಾಗುತ್ತಿದೆ  ಎಂದು ತಿಳಿದು ಕೊಳ್ಳಲಿ ಅವರಿಗೆ ಎಲ್ಲವು ಗೊತ್ತಿದ್ದು ಹೀಗೆ ಹೇಳುತ್ತಿದ್ದಾರೋ ಅಥವಾ ಅವರ ಗಮನಕ್ಕೆ ಇಲ್ಲವೊ ನನಗೆ ಗೊತ್ತಿಲ್ಲಾ ಸಲೀಂ ಅಹ್ಮದ್‌ ಬಗ್ಗೆ ನನಗೆ ಕನಿಕರ ಬರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ನೆಲಕಚ್ಚುತ್ತಿದ್ದರೂ  ಹೀಗೆ ಹೇಳಿದರೆ ನಾನು ಏನು ಹೇಳಲಿ ಎಂದು ಹೇಳಿದರು.

ಶಾಸಕರಿಗೆ ನೀಡುವ ಬತ್ತೆ ಚಹಾ ಕುಡಿಯಲಿಕ್ಕೆ ಸಾಲುವುದಿಲ್ಲಾ  ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್  ನೀಡಿರುವ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯು.ಟಿ ಖಾದರ್ ಯಾವ ಆಧಾರದ ಮೇಲೆ ಹೇಳಿದ್ದಾರೆ ನನಗೆ ಗೊತ್ತಿಲ್ಲ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿ ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ