ಬೀದರ್ ATM ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ಬಹುಮಾನ ಘೋಷಣೆ

ಬೀದರ್: ಎಟಿಎಂಗೆ ಹಣ ತುಂಬಲು ಬಂದಿದ್ದ ಸಿಎಂಎಸ್ ಕಂಪೆನಿ ಸಿಬ್ಬಂದಿಯನ್ನು ಹತ್ಯೆ ಮಾಡಿ 83 ಲಕ್ಷ ರೂ. ಹಣ ದೋಚಿ ಪರಾರಿಯಾಗಿದ್ದ ದರೋಡೆಕೋರರು ಇನ್ನೂ ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಗಳ ಸುಳಿವು ನೀಡಿದವರಿಗೆ ಪೊಲೀಸರು ಬಹುಮಾನ ಘೋಷಿಸಿದ್ದಾರೆ.
ಬಿಹಾರ ಮೂಲದ ದರೋಡೆಕೋರರಾದ ಅಮನ್ ಕುಮಾರ್, ಅಲೋಕ್ ಕುಮಾರ್ ಎಂಬವರ ಸುಳಿವು ನೀಡಿದವರಿಗೆ 5 ಲಕ್ಷ ರೂಪಾಯಿ ಬಹುಮಾನವನ್ನು ನೀಡುವುದಾಗಿ ಪೊಲೀಸರು ಘೋಷಣೆ ಮಾಡಿದ್ದಾರೆ.
ಜನವರಿ 16ರಂದು ಬೀದರ್ ನಲ್ಲಿ ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿತ್ತು. ಜಿಲ್ಲಾ ನ್ಯಾಯಾಲಯದ ಸನಿಹದಲ್ಲಿನ ಎಟಿಎಂನಲ್ಲಿ ಹಣ ಹಾಕಲು ಬಂದಿದ್ದ ಸಿಎಂಸಿಎಸ್ ಏಜೆನ್ಸಿ ಸಿಬ್ಬಂದಿಗಳ ಮೇಲೆ ಬೈಕ್ ನಲ್ಲಿ ಬಂದಿದ್ದ ದರೋಡೆಕೋರರ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ದರೋಡೆಕೋರರ ಗುಂಡಿಗೆ ಏಜೆನ್ಸಿಯ ಗಿರಿ ವೆಂಕಟೇಶ್ ಎಂಬವರು ಬಲಿಯಾಗಿದ್ದರು.
ಸದ್ಯ ದರೋಡೆಕೋರರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಎಟಿಎಂಗೆ ಹಾಕುವ ಹಣದ ಪೆಟ್ಟಿಗೆ ಜೊತೆಗೆ ದರೋಡೆಕೋರರು ಬೀದರ್ ನಿಂದ ನೇರವಾಗಿ ಹೈದರಾಬಾದ್ ಗೆ ತೆರಳಿದ್ದರು. ಅಬ್ಜಲ್ ಗಂಜ್ ನಲ್ಲಿ ಪ್ರತ್ಯಕ್ಷವಾಗಿದ್ದ ದರೋಡೆಕೋರರು ಬಸ್ ನಲ್ಲಿ ತೆರಳಲು ವಿಫಲ ಯತ್ನ ನಡೆಸಿದ್ದರು. ಈ ವೇಳೆ ಖಾಸಗಿ ಬಸ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: