8:21 PM Wednesday 20 - August 2025

ಉಜ್ವಲ ಫಲಾನುಭವಿಗಳಿಗೆ ಬಿಗ್ ಬೋನಾಸ್; 300 ರೂಪಾಯಿಗೆ ಎಲ್‌ಪಿಜಿ ಸಬ್ಸಿಡಿ ವಿಸ್ತರಿಸಿದ ಕೇಂದ್ರ ಸರ್ಕಾರ

07/03/2024

ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ಪ್ರತಿ ಎಲ್ ಪಿಜಿ ಸಿಲಿಂಡರ್ ಗೆ 300 ರೂ.ಗಳ ಸಬ್ಸಿಡಿಯನ್ನು ಮುಂದುವರಿಸುವುದಾಗಿ ಸರ್ಕಾರ ಗುರುವಾರ ಪ್ರಕಟಿಸಿದೆ.

ಈ ಸಬ್ಸಿಡಿ ವಿಸ್ತರಣೆಯು ಮುಂದಿನ ಹಣಕಾಸು ವರ್ಷಕ್ಕೆ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ಕಳೆದ ವರ್ಷ, ಅಕ್ಟೋಬರ್ ನಲ್ಲಿ, ಸರ್ಕಾರವು ವಾರ್ಷಿಕವಾಗಿ 12 ರೀಫಿಲ್‌ಗಳಿಗೆ 14.2 ಕೆಜಿ ಸಿಲಿಂಡರ್ ಗೆ ಸಬ್ಸಿಡಿಯನ್ನು 200 ರೂ.ಗಳಿಂದ 300 ರೂ.ಗೆ ಹೆಚ್ಚಿಸಿತ್ತು. ಈ ವರ್ಧಿತ ಸಬ್ಸಿಡಿ ಮಾರ್ಚ್ 31 ಕ್ಕೆ ಕೊನೆಗೊಳ್ಳುವ ಪ್ರಸಕ್ತ ಹಣಕಾಸು ವರ್ಷಕ್ಕೆ ಅನ್ವಯಿಸುತ್ತದೆ.

ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ (ಸಿಸಿಇಎ) ಈ ಸಬ್ಸಿಡಿಯನ್ನು 2024-25 ರವರೆಗೆ ವಿಸ್ತರಿಸಲು ಅನುಮೋದನೆ ನೀಡಿದೆ. ಕೇಂದ್ರ ಸಚಿವ ಪಿಯೂಷ್ ಗೋಯಲ್ ಈ ಮಾಹಿತಿಯನ್ನು ಸುದ್ದಿಗಾರರಿಗೆ ಹಂಚಿಕೊಂಡಿದ್ದಾರೆ.

ಈ ಕ್ರಮದಿಂದ ಸುಮಾರು 10 ಕೋಟಿ ಕುಟುಂಬಗಳು ಪ್ರಯೋಜನ ಪಡೆಯುವ ನಿರೀಕ್ಷೆಯಿದೆ. ಇದು ಸರ್ಕಾರಕ್ಕೆ 12,000 ಕೋಟಿ ರೂಪಾಯಿ ಹೊರೆ ನೀಡುತ್ತದೆ.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ

Exit mobile version