ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಯಲು ಬಿಗ್ ಪ್ಲ್ಯಾನ್: ಕಾನೂನು ತಂದ ಕೇಂದ್ರ ಸರ್ಕಾರ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರೀಕ್ಷಾ ಅಕ್ರಮಗಳನ್ನು ತಡೆಯುವ ಉದ್ದೇಶದಿಂದ ಕಟ್ಟುನಿಟ್ಟಿನ ಕಾನೂನನ್ನು ಕೇಂದ್ರ ಸರ್ಕಾರ ಶುಕ್ರವಾರದಿಂದ ಜಾರಿಗೆ ತಂದಿದೆ. ಈ ಕಾನೂನಿನ ಅಡಿಯಲ್ಲಿ ತಪ್ಪಿತಸ್ಥರಿಗೆ ೧೦ ವರ್ಷಗಳ ಜೈಲು ಶಿಕ್ಷೆ ಮತ್ತು ಒಂದು ಕೋಟಿ ರೂಪಾಯಿವರೆಗೆ ದಂಡ ವಿಧಿಸಬಹುದಾಗಿದೆ. ಜೂನ್ 21ರಿಂದ ಇದು ಜಾರಿಗೆ ಬರಲಿದೆ.
ಯುಜಿಸಿ-ನೆಟ್ ೨೦೨೪ರ ಪ್ರಶ್ನೆಪತ್ರಿಕೆ ವಿವಾದ ಮತ್ತು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಆಯೋಜಿಸಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯ ಸಂಬಂಧ ಸಿಬಿಐ ತನಿಖೆಗೆ ಗುರುವಾರ ಆದೇಶ ನೀಡಿದ ಬೆನ್ನಲ್ಲೇ ಈ ಕಾನೂನು ಜಾರಿಗೊಳಿಸಿರುವುದು ವಿಶೇಷ ಮಹತ್ವ ಪಡೆದಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿಯಲ್ಲೂ ಅಕ್ರಮ ನಡೆದಿರುವ ಬಗ್ಗೆ ವಿರೋಧ ಪಕ್ಷಗಳು ದೂರು ನೀಡಿವೆ. ಇದರ ಫಲಿತಾಂಶವನ್ನು ಜೂನ್ ೪ರಂದು ಪ್ರಕಟಿಸಲಾಗಿತ್ತು.
ಈ ಕಾನೂನು ಯಾವಾಗ ಜಾರಿಯಾಗಲಿದೆ ಎಂದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರನ್ನು ಸುದ್ದಿಗಾರರು ಪ್ರಶ್ನಿಸಿದ ಸಂದರ್ಭದಲ್ಲಿ ಕಾನೂನು ಸಚಿವಾಲಯ ಈ ಸಂಬಂಧ ನಿಯಮಾವಳಿ ರೂಪಿಸುತ್ತದೆ ಎಂದು ಸಚಿವರು ತಿಳಿಸಿದ್ದರು. ಕಾಯ್ದೆಗೆ ಫೆಬ್ರುವರಿ ೯ರಂದು ರಾಜ್ಯಸಭೆ ಒಪ್ಪಿಗೆ ನೀಡಿತ್ತು. ಲೋಕಸಭೆ ಫೆಬ್ರವರಿ ೧೬ರಂದು ಇದನ್ನು ಅನುಮೋದಿಸಿತ್ತು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth