4:24 AM Wednesday 20 - August 2025

ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮುಡಾ ಕೇಸ್ ಸಿಬಿಐ ತನಿಖೆಯಿಂದ ಸಿಎಂ ಪಾರು

siddaramaiah
07/02/2025

ಧಾರವಾಡ: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕೇ? ಬೇಡವೇ? ಎನ್ನುವ ಬಗ್ಗೆ ಇಂದು ಧಾರವಾಡ ಹೈಕೋರ್ಟ್ ಪೀಠ ತೀರ್ಪು ಪ್ರಕಟಿಸಿದೆ.

ಸದ್ಯ ಸಿಬಿಐ ತನಿಖೆಗೆ ಪ್ರಕರಣವನ್ನು ನೀಡುವ ಅಗತ್ಯವಿಲ್ಲ ಎಂದಿರುವ ಧಾರವಾಡ ಹೈಕೋರ್ಟ್ ಪೀಠ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.

ಮುಡಾದಲ್ಲಿ ನಿಯಮಗಳನ್ನು ತಮಗಿಷ್ಟ ಬಂದಂತೆ ತಿರುಚಲಾಗಿದೆ. ಪ್ರಭಾವಿಗಳಿರುವ ಈ ಕೇಸ್ ನಲ್ಲಿ ಸರ್ಕಾರದ ಅಧೀನದಲ್ಲಿರುವ ಪೊಲೀಸರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ, ಆರೋಪಿ ಮುಖ್ಯುಮಂತ್ರಿ ಎನ್ನುವ ಒಂದೇ ಕಾರಣಕ್ಕೆ ಸಿಬಿಐ ಅಥವಾ ಸ್ವತಂತ್ರ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿರುವ ಉದಾಹರಣೆಗಳಿವೆ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದರು.

ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ,  ಲೋಕಾಯುಕ್ತ ಸರ್ಕಾರದ ಹಿಡಿತದಲ್ಲಿದೆ ಎಂದು ಹೇಳಿದ್ದಾರೆ. ಆದರೆ ಸಿಬಿಐ ಕೂಡ ಕೇಂದ್ರ ಸರ್ಕಾರದ ಹಿಡಿತದಲ್ಲಿದೆ. ಹೀಗಾಗಿ ಸಿಬಿಐ ಸ್ವತಂತ್ರ ತನಿಖಾ ಸಂಸ್ಥೆ ಎನ್ನಲಾಗುವುದಿಲ್ಲ ಎಂದರು.

ಲೋಕಾಯುಕ್ತ ಸಂಸ್ಥೆ ಕಳಂಕಿತ ಸಂಸ್ಥೆ ಎಂದು ಹೇಳಲು ಆಗಲ್ಲ. ಲೋಕಾಯುಕ್ತ ಪೊಲೀಸರ ಮೇಲೆ ಲೋಕಾಯುಕ್ತ ಸಂಸ್ಥೆಯ ನಿಗಾ ಇದೆ. ಹೀಗಾಗಿ ಲೋಕಾಯುಕ್ತ ತನಿಖೆಗೆ ಸ್ವತಂತ್ರವಾಗಿರಲಿದೆ ಎಂದು ವಾದ ಮಂಡಿಸಿದರು.

ಸಿದ್ದರಾಮಯ್ಯ ಪರ ವಕೀಲ ಅಭಿಚೇಕ್ ಮನುಸಿಂಘ್ವಿ ವಾದಿಸಿ, ಸಿಬಿಐ ತನಿಖೆಗೆ ಅರ್ಹವಾಗಲು ಇದು ಅಪರೂಪದ ಪ್ರಕರಣವಲ್ಲ. ದೂರುದಾರರಿಗೆ ರಾಜ್ಯಪಾಲರ ಅನುಮತಿ ಬೇಕಿತ್ತು ಪಡೆದರು. ಮೊದಲಿಗೆ ಲೋಕಾಯುಕ್ತ ಪೊಲೀಸರ ತನಿಖೆಗೆ ಕೋರಿದರು. ತನಿಖೆ ಪೂರ್ಣಗೊಳ್ಳುವ ಮುನ್ನವೇ ಸಿಬಿಐ ತನಿಖೆ ಕೇಳುತ್ತಿದ್ದಾರೆ. ಲೋಕಾಯುಕ್ತ ಪೊಲೀಸರ ತನಿಖೆಯ ಲೋಪವೇನು ಎಂದು ಹೇಳಿಲ್ಲ, ಆರೋಪಿ ಸಿಎಂ ಸ್ಥಾನದಲ್ಲಿದ್ದಾರೆ. ಹೀಗಾಗಿ ಸಿಬಿಐಗೆ ಕೊಡಿ ಎನ್ನುತ್ತಿದ್ದಾರೆ. ಇದು ತಪ್ಪು ಎಂದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BR3b3qhWZWaCzpD1m6N5uu

ಇತ್ತೀಚಿನ ಸುದ್ದಿ

Exit mobile version