4:42 PM Wednesday 21 - January 2026

ಚಿತ್ರದುರ್ಗದಲ್ಲಿ ಕೇಂದ್ರ ಸಚಿವ ನಾರಾಯಣಸ್ವಾಮಿಗೆ ಬಿಗ್ ಶಾಕ್:  ಟಿಕೆಟ್ ಗೋವಿಂದ ಕಾರಜೋಳ ಪಾಲು

chithradurga
27/03/2024

ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲೂ ಹಾಲಿ ಸಂಸದ ಎ.ನಾರಾಯಣಸ್ವಾಮಿ ಅವರಿಗೆ ಟಿಕೆಟ್ ಕೈತಪ್ಪಿದ್ದು, ಬಿಜೆಪಿ ಹೈಕಮಾಂಡ್ ಗೋವಿಂದ ಕಾರಜೋಳ ಅವರಿಗೆ ಟಿಕೆಟ್ ನೀಡಿದೆ.

ಹಾಲಿ ಕೇಂದ್ರ ಸಚಿವರೂ ಆಗಿರುವ ಎ.ನಾರಾಯಣಸ್ವಾಮಿ ಟಿಕೆಟ್ ವಂಚಿತರಾಗಿದ್ದು,  ಚಿತ್ರದುರ್ಗ ಜಿಲ್ಲೆ ಮೂಲದವರನ್ನು ಕಡೆಗಣಿಸಿ ವಿಜಯಪುರ ಜಿಲ್ಲೆ ಮೂಲದ ಮಾಜಿ ಡಿಎಸಿಎಂ ಗೋವಿಂದ ಕಾರಜೋಳ ಅವರಿಗೆ ಮಣೆ ಹಾಕಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರ ಟಿಕೆಟ್ ಕೂಡ ಫೈನಲ್ ಮಾಡುವ ಮೂಲಕ ಬಿಜೆಪಿ  ರಾಜ್ಯದಲ್ಲಿ ಸ್ಪರ್ಧಿಸುವ ಎಲ್ಲ 25 ಲೋಕಸಭಾ ಕ್ಷೇತ್ರಗಳಿಗೂ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ.

ಅಭ್ಯರ್ಥಿಗಳ ಪಟ್ಟಿಯನ್ನು ಫೈನಲ್ ಮಾಡಿರುವ ಬೆನ್ನಲ್ಲೇ ಬಿಜೆಪಿಯಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಅಸಮಾಧಾನ ಬುಗಿಲೆದ್ದಿದೆ. ಅತ್ತ ಕಾಂಗ್ರೆಸ್ ನಲ್ಲೂ ಕೋಲಾರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ದೊಡ್ಡ ಯುದ್ಧವೇ ನಡೆಯುತ್ತಿದೆ. ಚಿತ್ರದುರ್ಗದಲ್ಲಿ ವಿವಾದ ಆರಂಭವಾಗುವ ಎಲ್ಲ ಲಕ್ಷಣಗಳು ಕಂಡು ಬಂದಿವೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version