5:23 AM Wednesday 20 - August 2025

ಕಾಶ್ಮೀರ ಕಣಿವೆಯಲ್ಲಿ ಎಲ್ಇಟಿ ಕಮಾಂಡರ್ ಉಸ್ಮಾನ್ ಸೇರಿದಂತೆ ಮೂವರು ಉಗ್ರರ ಹತ್ಯೆ

02/11/2024

ಕಾಶ್ಮೀರ ಕಣಿವೆಯಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್ ಪ್ರಕರಣಗಳಲ್ಲಿ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ. ಇದು ಸದ್ಯ ನಡೆಯುತ್ತಿರುವ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿನ ಪ್ರಮುಖ ಯಶಸ್ಸು. ಈ ಎನ್‌ಕೌಂಟರ್ ಗಳು ಶ್ರೀನಗರ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ನಡೆದಿದ್ದು, ಅಲ್ಲಿ ಗಣನೀಯ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಮಧ್ಯ ಕಾಶ್ಮೀರದ ಶ್ರೀನಗರ ಜಿಲ್ಲೆಯ ಖನ್ಯಾರ್ ಪ್ರದೇಶದಲ್ಲಿ ಇಂದು ಮುಂಜಾನೆ ಮೊದಲ ಎನ್ ಕೌಂಟರ್ ಪ್ರಾರಂಭವಾಯಿತು. ಇದು ಎರಡು ವರ್ಷಗಳಲ್ಲಿ ಈ ಜನನಿಬಿಡ ಡೌನ್ಟೌನ್ ಪ್ರದೇಶದಲ್ಲಿ ನಡೆದ ಮೊದಲ ಪ್ರಮುಖ ಎನ್ ಕೌಂಟರ್ ಆಗಿದೆ.

ಹತ್ಯೆಗೀಡಾದ ಭಯೋತ್ಪಾದಕನನ್ನು ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಎಲ್ಇಟಿ ಕಮಾಂಡರ್ ಉಸ್ಮಾನ್ ಎಂದು ಗುರುತಿಸಲಾಗಿದ್ದು, ಈತ ಇನ್ಸ್‌ಪೆಕ್ಟರ್ ಮಸ್ರೂರ್ ಹತ್ಯೆ ಸೇರಿದಂತೆ ಅನೇಕ ದಾಳಿಗಳಿಗೆ ಕಾರಣನಾಗಿದ್ದ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version