ಬಿಹಾರದಲ್ಲಿ ಬಿರುಸಿನ ಮತದಾನ: ಮತ ಚಲಾಯಿಸಿದ ಪ್ರಮುಖ ರಾಜಕೀಯ ನಾಯಕರು
06/11/2025
Bihar Assembly Election: ಪಾಟ್ನಾ: ಬಿಹಾರ ರಾಜ್ಯ ಮಾತ್ರವಲ್ಲ, ರಾಷ್ಟ್ರ ರಾಜಕಾರಣದಲ್ಲೂ ಸಂಚಲನ ಸೃಷ್ಟಿಯಾಗುವ ಸಾಧ್ಯತೆ ಇರುವ ಬಿಹಾರ ರಾಜ್ಯ ವಿಧಾನ ಸಭಾ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ. 243 ಸ್ಥಾನಗಳಲ್ಲಿ ಮೊದಲ ಹಂತದ 121 ಸ್ಥಾನಗಳಿಗೆ ಇಂದು ಬೆಳಗ್ಗೆ 9 ಗಂಟೆಯವರೆಗೆ ಶೇ.13.13%ರಷ್ಟು ಮತದಾನವಾಗಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪನಾಯಕ ಸಾಮ್ರಾಟ್ ಚೌಧರಿ, ಆರ್ ಜೆಡಿಯ ಲಾಲು ಯಾದವ್ ಮತ್ತು ತೇಜಸ್ವಿ ಯಾದವ್ ಮತ್ತು ಎಲ್ ಜೆಪಿಯ ಚಿರಾಗ್ ಪಾಸ್ವಾನ್ ಸೇರಿದಂತೆ ಉನ್ನತ ನಾಯಕರು ಈಗಾಗಲೇ ಮತ ಚಲಾಯಿಸಿದ್ದಾರೆ. ಅಲ್ಲದೇ ಇತರರನ್ನು ಮತ ಚಲಾವಣೆ ಮಾಡುವಂತೆ ಪ್ರೇರೇಪಿಸಿ ಎಂದು ಸಂದೇಶ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/H1duNIQRfXnJcfQKWPzNqD
























