ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಮಹಾಘಟಬಂಧನ್ ಅಭ್ಯರ್ಥಿಗಳಿಗೆ ಮುನ್ನಡೆ - Mahanayaka

ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ: ಮಹಾಘಟಬಂಧನ್ ಅಭ್ಯರ್ಥಿಗಳಿಗೆ ಮುನ್ನಡೆ

10/11/2020

ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭಗೊಂಡಿದ್ದು, ಕ್ಷಣಕ್ಷಣಕ್ಕೂ ಕುತೂಹಲವನ್ನು ಕೆರಳಿಸಿದೆ.  ಮೊದಲ ಸುತ್ತಿನಲ್ಲಿ ಅಂಚೆ ಮತ ಎಣಿಕೆ ನಡೆದಿದೆ.

ಬಿಜೆಪಿ 22, ಆರ್‌ಜೆಡಿ 21, ಜೆಡಿಯು 6, ಕಾಂಗ್ರೆಸ್ 7, ಸಿಪಿಐ (ಎಂಎಲ್) 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಗಳು 28ರಲ್ಲಿ, ಮಹಾಘಟಬಂಧನ್ ಅಭ್ಯರ್ಥಿಗಳು 32 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನ ಗೆಲ್ಲುವ ಸಾಧ್ಯತೆ ಹೆಚ್ಚು ಎಂದು ಮತಗಟ್ಟೆ ಸಮೀಕ್ಷೆಗಳಲ್ಲಿ ಹೆಚ್ಚಿನವು ಈಗಾಗಲೇ ಅಂದಾಜಿಸಿವೆ. ಫಲಿತಾಂಶ ಕೂಡ ಆರಂಭದಲ್ಲಿಯೇ ಮಹಾಘಟಬಂಧನ್ ಕಡೆಗೆ ವಾಲುತ್ತಿದೆ.

Disclaimer:

www.mahanayaka.in ಅಂತರ್ಜಾಲ ಮಾಧ್ಯಮದಲ್ಲಿ ಪ್ರಕಟವಾದ ಸುದ್ದಿಗಳಲ್ಲಿ ಯಾರದ್ದೇ ಭಾವನೆಗಳಿಗೆ ಧಕ್ಕೆಯಾಗುವಂತಹ ಅಥವಾ ನೋವುಂಟಾಗುವಂತಹ ಅಥವಾ ನಿಮಗೆ ಆಕ್ಷೇಪಾರ್ಹ ಎನಿಸಿದಂತಹ ಅಂಶಗಳ ಬಗ್ಗೆ ಓದುಗರು 9686872149 ನಂಬರ್ ಗೆ ಸುದ್ದಿಯ ಲಿಂಕ್ ಸಹಿತ ನಿಮ್ಮ ದೂರು ಸಲಹೆಗಳನ್ನು ವಾಟ್ಸಾಪ್ ಮಾಡಬಹುದು. ಅಥವಾ ಕರೆ ಮಾಡಬಹುದು. ನಿಮ್ಮ ದೂರನ್ನು ಪರಿಶೀಲಿಸಿ, ಅಂತಹ ಆಕ್ಷೇಪಾರ್ಹ ಅಂಶಗಳನ್ನು ತೆಗೆದು ಹಾಕಲು ಮಾಧ್ಯಮವು ಬದ್ಧವಾಗಿದೆ.

ಇತ್ತೀಚಿನ ಸುದ್ದಿ